ಸಿಎಂ ಆಹ್ವಾನಕ್ಕೆ ವಿಜಯೇಂದ್ರ ತಿರುಗೇಟು!

geetha
ಮಂಗಳವಾರ, 6 ಫೆಬ್ರವರಿ 2024 (16:21 IST)
ಬೆಂಗಳೂರು: ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ “ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ” ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ, ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್ ನ ಅಸಲೀ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ ಎಂದು ವಿಜಯೇಂದ್ರ ಕಿಡಿ ಕಾರಿದ್ದಾರೆ. 

ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ ಹಮ್ಮಿಕೊಂಡಿರುವ ಚಲೋ ದಿಲ್ಲಿ ಪ್ರತಿಭಟನೆಗೆ ನೀಡಿರುವ ಆಹ್ವಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಸಂದೇಶ ಹಂಚಿಕೊಂಡಿರುವ ವಿಜಯೇಂದ್ರ ಚಲೋ ದಿಲ್ಲಿ ಬದಲು ಚಲೋ ಹಳ್ಳಿ ಮಾಡಿ ನಾವೂ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಸಮೃದ್ಧ ಕರ್ನಾಟಕ ಮೋದಿ ಜೀ ಅವರ ಆದ್ಯತೆಯಾಗಿರುವಾಗ ‘ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ನಡೆಸಿ ನಾವೂ ಬರುತ್ತೇವೆ ಎಂದು ವಿಜಯೇಂದ್ರ ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆ, ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮುಂದಿನ ಸುದ್ದಿ
Show comments