Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್ ಯಶಸ್ವಿಯಾಗಿದೆ: ವಾಟಾಳ್ ನಾಗರಾಜ್

ಕರ್ನಾಟಕ ಬಂದ್ ಯಶಸ್ವಿಯಾಗಿದೆ: ವಾಟಾಳ್ ನಾಗರಾಜ್
ಬೆಂಗಳೂರು , ಸೋಮವಾರ, 12 ಜೂನ್ 2017 (12:22 IST)
ಶಾಶ್ವತ ನೀರಾವರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್`ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮಧ್ಯೆ, ಟೌನ್ ಹಾಲ್ ಬಳಿ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ಹಲವರು ಪ್ರತಿಭಟನೆ ಸಾಥ್ ನೀಡಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ರೈತರು ಮತ್ತು ಕನ್ನಡಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ, ವೈಯಕ್ತಿಕ ಉದ್ದೇಶಕ್ಕಲ್ಲ ಎಂದು ಸ್ಪಷ್ಟಪಡಿಸಿದರು. 

ಇತ್ತ, ಮೇಕ್ರಿ ಸರ್ಕಲ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ಕರವೇ ಪ್ರವೀಣ್ ಶೆಟ್ಟಿ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ, ಪ್ರವೀಣ್ ಶೆಟ್ಟಿ ಮತ್ತವರ ಬೆಂಬಲಿಗರ ಬಿಎಂಟಿಸಿ ಬಸ್`ನಲ್ಲಿ ಕರೆದೊಯ್ಯಲಾಗಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

Share this Story:

Follow Webdunia kannada

ಮುಂದಿನ ಸುದ್ದಿ

ಲಾಲೂ ಪ್ರಸಾದ್ ಯಾದವ್ ಮಕ್ಕಳಿಗೆ ವಧು ಬೇಕಾಗಿದೆಯಂತೆ!