Publish Date: Sat, 28 Oct 2017 (10:53 IST)
Updated Date: Sat, 28 Oct 2017 (10:55 IST)
ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಆದರೆ ಅತ್ತ ಕಾಂಗ್ರೆಸ್ ಸಚಿವರ ಬೆನ್ನಿಗೆ ನಿಂತಿದೆ.
ಮುಂಬರುವ ಬೆಳಗಾವಿ ಅಧಿವೇಶನ ನಡೆಯುವುದರೊಳಗಾಗಿ ಜಾರ್ಜ್ ನೀಡಲೇಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದು ನಿಶ್ಚಿತ ಎಂದು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುಡುಗಿದ್ದಾರೆ.
ಆದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕ ಆರ್ ವಿ ದೇಶಪಾಂಡೆ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್ ಐಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ತೀರ್ಮಾನ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ