Select Your Language

Notifications

webdunia
webdunia
webdunia
webdunia

ಜಿಎಸ್‌ಟಿ ಸರಳೀಕರಣದಿಂದ ರಾಜ್ಯದ ಬೊಕ್ಕಸಕ್ಕೆ ₹ 15,000 ಕೋಟಿ ನಷ್ಟ: ಸಿದ್ದರಾಮಯ್ಯ

Bihar Assembly Elections, Chief Minister Siddaramaiah, Prime Minister Narendra Modi

Sampriya

ಬೆಂಗಳೂರು , ಶನಿವಾರ, 4 ಅಕ್ಟೋಬರ್ 2025 (10:02 IST)
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಸರಳೀಕರಣಗೊಳಿಸಿದೆ. ಕೇಂದ್ರ ಈ ಕ್ರಮದಿಂದ ರಾಜ್ಯಕ್ಕೆ ₹ 15,000 ಕೋಟಿ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆರೋಪಿಸಿದ್ದಾರೆ.

ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸುತ್ತಿದ್ದೇವೆ. ಜಿಎಸ್‌ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ ಎಂದರು.

ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ರೂಪಾಯಿ ನಷ್ಟವಾಗಲಿದೆ. ಕೇಂದ್ರ ಸರ್ಕಾರವು ಎನ್‌ಡಿಎ ಆಡಳಿತದಡಿ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್‌ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ ₹ 3,200 ಕೋಟಿ ರಾಜ್ಯಕ್ಕೆ ನೀಡಲಾಗಿದೆ. ಉತ್ತರ ಪ್ರದೇಶಕ್ಕೆ ಶೇ 18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ 3.5 ನೀಡುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಘೋರ ಅನ್ಯಾಯ ಎಂದು ದೂರಿದರು. 

2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್‌ಟಿಯನ್ನು ಜಾರಿಗೆ ತಂದು, ದರ ನಿಗದಿಪಡಿಸಿತು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರ ಸರ್ಕಾರ, ಆ ಹಣವನ್ನು ಮರಳಿ ಜನರಿಗೆ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್‌ಟಿ ದರವನ್ನು ತಾವೇ ಕಡಿಮೆ ಮಾಡಿ, ಜಿಎಸ್‌ಟಿ ಉತ್ಸವದ ಹೆಸರಿನಲ್ಲಿ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅ.9ರಂದು ತೆರೆಯಲಿದೆ ಹಾಸನಾಂಬ ದೇಗುಲ: ದೇವಿ ದರ್ಶನಕ್ಕೆ ಗೋಲ್ಡ್ ಪಾಸ್ ವ್ಯವಸ್ಥೆ ಜಾರಿ