Select Your Language

Notifications

webdunia
webdunia
webdunia
webdunia

ರಾಜ್ಯದ ಹೆಸರಾಂತ ಸವದತ್ತಿ ಯಲ್ಲಮ್ಮ ದೇಗುಲವ ಅಭಿವೃದ್ಧಿಗೆ ₹100ಕೋಟಿ ಮಂಜೂರು

Karnataka Must Visited Temple, Savadatti Yallamma Temple, Cengtral Government,

Sampriya

ಬೆಳಗಾವಿ , ಬುಧವಾರ, 4 ಡಿಸೆಂಬರ್ 2024 (19:09 IST)
Photo Courtesy X
ಬೆಳಗಾವಿ: ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವ ಎಚ್.ಕೆ.ಪಾಟೀಲ ಅವರು ಕೇಂದ್ರ ಪ್ರವಾಸೋಧ್ಯಮ ಕಾರ್ಯದರ್ಶಿ ಅವರಿಗೆ ಪತ್ರ ಬರೆಯುವ ಮೂಲಕ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಸವದತ್ತಿ ಅಭಿವೃದ್ಧಿ ಅಗತ್ಯದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು.

ಇದೀಗ ಅದರಂತೆ  ಕರ್ನಾಟಕದ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿರುವ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇಗುಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹100ಕೋಟಿ ರೂ ಮಂಜೂರು ಮಾಡಿದೆ.

ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಎಚ್ ಕೆ ಪಾಟೀಲ ಅವರು, ಸವದತ್ತಿ ಯಲ್ಲಮ್ಮ ದೇಗುಲಕ್ಕೆ ಒಂದು ಕೋಟಿಗೂ ಅಧಿಕ ಪ್ರವಾಸಿಗರೂ ಮತ್ತು ಭಕ್ತರು ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ವಸತಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದ್ದು ಈಗಿರುವ ಸೌಕರ್ಯ ಉನ್ನತೀಕರಣ ಮತ್ತು ಹೊಸ ಮೂಲ ಸೌಕರ್ಯಗಳ ಅಭಿವೃದ್ಧಿಗೆ ನೂರು ಕೋಟಿ ರೂ.ಗಳ ಅಗತ್ಯವಿದೆ ಎಂಬುದನ್ನು ಉಲ್ಲೇಖಿಸಿದ್ದರು.

ಸಚಿವ ಎಚ್.ಕೆ.ಪಾಟೀಲ್ ಹರ್ಷ: ಇನ್ನು ಮನವಿಗೆ ಸ್ಪಂದಿಸಿ ಹಣ ಬಿಡುಗಡೆ ಮಾಡಿರುವುದಕ್ಕೆ ರಾಜ್ಯ ಪ್ರವಾಸೋದ್ಯಮ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್​ ಪ್ರತಿಕ್ರಿಯಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿ ಸತ್ತ ಬಳಿಕ ಮರು ಮದುವೆಗೆ ಎಷ್ಟು ಸಮಯ ಬೇಕು: ಗೂಗಲ್‌ನಲ್ಲಿ ಸರ್ಚ್‌ ಮಾಡಿ ಸಿಕ್ಕಿಬಿದ್ದ ಪತಿ