Publish Date: Mon, 19 Jan 2026 (19:06 IST)
Updated Date: Mon, 19 Jan 2026 (19:09 IST)
ಬೆಂಗಳೂರು: ಅಬಕಾರಿ ಡಿಸಿಯೊಬ್ಬರು ₹25 ಲಕ್ಷ ಲಂಡ ಪಡೆದ ಪ್ರಕರಣದಡಿಯಲ್ಲಿ ಅಬಕಾರಿ ಸಚಿವರೂ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಚಿವ ಆರ್ ಬಿ ತಿಮ್ಮಾಪುರ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರನ್ನು ನೀಡಲಾಗಿದೆ.
ಇತ್ತೀಚೆಗೆ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಬಾರ್ ಲೈಸೆನ್ಸ್ ನೀಡಲು ₹25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ಇನ್ನೂ ಜಗದೀಶ್ ಸೇರಿದಂತೆ ಐವರು ಅಬಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇನ್ನು ಸೋರಿಕೆಯಾಘಿರುವ ಆಡಿಯೋ ಕ್ಲಿಪ್‌ನಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು, ಅಬಕಾರಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ದೂರುದಾರ ಲಕ್ಷ್ಮಿನಾರಾಯಣ ಅವರು ಆರೋಪ ಮಾಡಿದ್ದಾರೆ.
ಬಹಿರಂಗವಾಗಿರುವ ಆಡಿಯೋ ಕ್ಲಿಪ್‌ನಲ್ಲಿ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಅವರು ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರ ವಿರುದ್ಧ ಲಕ್ಷ್ಮಿನಾರಾಯಣ ದೂರು ನೀಡಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.