ರಂಗನತಿಟ್ಟಿನಲ್ಲಿ ಬಾನಾಡಿಗಳ ಕಲರವ
ಝಳು ಝುಳು ಸದ್ದು ಮಾಡುತ್ತಾ ವಿಶಾಲವಾಗಿ ಹರಡಿ ಹರಿಯುವ ಕಾವೇರಿ ನದಿ... ದಂಡೆಯ ಹೆಬ್ಬಂಡೆಗಳ ಮೇಲೆ ಎಳೆ ಬಿಸಿಲಿಗೆ ಮೈಯೊಡ್ಡಿ ಮಲಗಿರುವ ಮೊಸಳೆಗಳು... ನಡುಗಡ್ಡೆಯಲ್ಲಿ ಬೆಳೆದು ನಿಂತ ಹೆಮ್ಮರಗಳಲ್ಲಿ ಬೀಡು ಬಿಟ್ಟ ಹಕ್ಕಿಗಳು... ಅವುಗಳು ಹೊರಡಿಸುವ ಚಿಲಿಪಿಲಿ ನಿನಾದ... ದೋಣಿಯಲ್ಲಿ ಕುಳಿತು ನದಿಯಲ್ಲಿ ಗಿರಕಿ ಹೊಡೆಯುತ್ತಾ ಪಕ್ಷಿಗಳನ್ನು ವೀಕ್ಷಿಸುವ ವಿಹಾರಿಗಳು... ಇದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿಯಿರುವ ರಂಗನತಿಟ್ಟಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕಾಣಸಿಗುವ ದಿನನಿತ್ಯದ ದೃಶ್ಯಗಳು.ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿಕೃಷ್ಣರಾಜಸಾಗರ ಜಲಾಶಯದಿಂದ ಧುಮ್ಮಿಕ್ಕಿ ಹರಿಯುವ ಕಾವೇರಿ ನದಿ ಶ್ರೀರಂಗಪಟ್ಟಣದ ಬಳಿ ದ್ವೀಪ ಸೃಷ್ಟಿಸಿದ್ದು, ಈ ದ್ವೀಪವೇ ರಂಗನತಿಟ್ಟು. ಇಲ್ಲಿ ಬೆಳೆದು ನಿಂತಿರುವ ಹೆಮ್ಮರಗಳೇ ಪಕ್ಷಿಗಳಿಗೆ ಆಶ್ರಯ ತಾಣಗಳಾಗಿವೆ. ರಂಗನತಿಟ್ಟು ಮೈಸೂರು ಮಂಡ್ಯ ಹೆದ್ದಾರಿ ನಡುವೆ ಸಿಗುವ ಶ್ರೀರಂಗಪಟ್ಟಣದಿಂದ 4ಕಿ,ಮೀ., ಮೈಸೂರಿನಿಂದ 19ಕಿ.ಮೀ. ಹಾಗೂ ಬೆಂಗಳೂರಿನಿಂದ 128ಕಿ.ಮೀ ದೂರದಲ್ಲಿದೆ.