Publish Date: Sat, 13 Apr 2019 (19:17 IST)
Updated Date: Sat, 13 Apr 2019 (19:25 IST)
ನಾನೂ ನಗಬೇಕು. ನನ್ನ ಕ್ಷೇತ್ರದ ಜನರೂ ಸಂತಸದಿಂದ ನಗಬೇಕು ಎಂಬುದು ನನ್ನ ಅಭಿಲಾಷೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನನಗೆ ಗಂಟು ಮುಖ ಹಾಕಿಕೊಳ್ಳಲು ಬರುವುದಿಲ್ಲ ಎಂದು ಕೇಂದ್ರ ಸಚಿವ ಟಾಂಗ್ ನೀಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಈ ಟಾಂಗ್ ನೀಡಿದರು.
ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ಕುರುಬರಹಳ್ಳಿ ಸರ್ಕಲ್‍ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ನಾನು ಯಾವಾಗಲೂ ನಗುತ್ತಿರುತ್ತೇನೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ನಗು ಆರೋಗ್ಯಕ್ಕೆ ಒಳ್ಳೆಯದು. ಸಿದ್ದರಾಮಯ್ಯ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಎಂದು ಕಾಂಗ್ರೆಸಿಗರು ಪ್ರಶ್ನಿಸುತ್ತಿದ್ದಾರೆ. ಎಲ್ಲೆಡೆ ಅಪಪ್ರಚಾರ ಮಾಡಿಕೊಂಡು ಬರುತ್ತಿದ್ದಾರೆ. ರಕ್ಷಣಾ ಇಲಾಖೆಗೆ ಸೇರಿದ ರಾಜ್ಯದ ಕೆಲ ಭೂಮಿಗಳ ವಿವಾದ ಹಲವು ವರ್ಷಗಳಿಂದ ಇತ್ಯರ್ಥವಾಗಿರಲಿಲ್ಲ. ನಾನು ಕೇಂದ್ರ ಸಚಿವನಾದ ನಂತರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನೇ ಬೆಂಗಳೂರಿಗೆ ಕರೆಸಿ 28 ಪ್ರಕರಣದಲ್ಲಿ 21 ಸಮಸ್ಯೆ ಪರಿಹರಿಸಿಕೊಟ್ಟಿದ್ದೇನೆ ಎಂದು ಹೇಳಿದರು.