Publish Date: Sat, 13 Apr 2019 (15:54 IST)
Updated Date: Sat, 13 Apr 2019 (15:55 IST)
ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದಿವೆ.
ಹೀಗಾಗಿ ಚುನಾವಣಾ ಕಾವು ಕೂಡಾ ಏರ ತೊಡಗಿದೆ. ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರುಗೆ ಆಗಮಿಸಲಿದ್ದಾರೆ. ನಗರದ ಕೇಂದ್ರ ಮೈದಾನದಲ್ಲಿ ನಡೆಯುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮದುರೈ ಯಿಂದ ವಿಶೇಷ ವಿಮಾನದಲ್ಲಿ ಹೋರಾಡಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 4 ಗಂಟೆಗೆ ಆಗಮಿಸಲಿದ್ದಾರೆ.
ಬಳಿಕ ರಸ್ತೆ ಮಾರ್ಗದ ಮೂಲಕ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 3 ಸಾವಿರ ಮಂದಿ ಪೇಟ ಧರಿಸಿ ಚೌಕಿದಾರರಾಗಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಳುನಾಡನ್ನು ನೆನಪಿಸುವ ವಿಶೇಷ ಸ್ಮರಣಿಕೆ ನೀಡಿ ಸನ್ಮಾನ ನಡೆಯಲಿದೆ.