ಮೈತ್ರಿ ಅಭ್ಯರ್ಥಿ ಡೇರಿಗೆ ಹೋಗಿ ಮೇವು ಹಾಕಿದ್ಯಾಕೆ?

Webdunia
ಬುಧವಾರ, 24 ಏಪ್ರಿಲ್ 2019 (17:37 IST)
ಎದುರಾಳಿಯನ್ನು ಸೋಲಿಸಲೇಬೇಕು ಎಂದು ಕಾಲಿಗೆ ಗಾಲಿ ಕಟ್ಟಿಕೊಂಡವರಂತೆ ತಿರುಗಾಡಿ ಪ್ರಚಾರ ನಡೆಸಿ, ನಿನ್ನೆಯಷ್ಟೇ ಚುನಾವಣೆ ಮುಗಿಸಿದ್ದರು ಮೈತ್ರಿ ಅಭ್ಯರ್ಥಿ. ಆದರೆ ಇಂದು ಡೇರಿಗೆ ಹೋಗಿ ಮೇವು ಹಾಕಿದ್ದಾರೆ.

ರೈತ ಕುಟುಂಬದಿಂದ ಬಂದು, ರಾಜ್ಯ ರಾಜಕಾರಣದಲ್ಲಿ ಹೆಸರು ಮಾಡಿರುವ ವಿನಯ ಕುಲಕರ್ಣಿ ಇದೀಗ ರಾಷ್ಟ್ರ ರಾಜಕಾರಣದ ಚುನಾವಣೆಗೆ ಸ್ಪರ್ಧಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ವಿನಯ ಕುಲಕರ್ಣಿ, ಕಣಕ್ಕಿಳಿದಾಗಿನಿಂದ ಶತಾಯಗತಾಯ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರನ್ನು ಸೋಲಿಸಲೇಬೇಕು ಎಂದು ಕಾಲಿಗೆ ಗಾಲಿ ಕಟ್ಟಿಕೊಂಡವರಂತೆ ತಿರುಗಾಡಿ ಪ್ರಚಾರ ನಡೆಸಿದ್ರು.

ನಿನ್ನೆಯಷ್ಟೇ ಚುನಾವಣೆ ಮುಗಿಸಿದ್ದಾರೆ. ಲೋಕಸಭಾ ಕ್ಷೇತ್ರದ ಮತದಾರರ ಬಳಿ ಹೋಗಿ ಮತಯಾಚನೆ ಮಾಡಿ, ಸಾಕಷ್ಟು ಸಭೆ, ಸಮಾರಂಭಗಳನ್ನು ಮಾಡಿ 15-20 ದಿನ ವಿಶ್ರಾಂತಿ ಇಲ್ಲದೇ ಓಡಾಡಿದ ವಿನಯ್, ಇದೀಗ ಮತದಾನ ಮುಗಿಸಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಬೆಳಿಗ್ಗೆ ತಮ್ಮ ಮನೆಯಲ್ಲಿ ಮಕ್ಕಳೊಂದಿಗೆ ಕಾಲ ಕಳೆದರು. ನಂತರ ತಮ್ಮದೇ ಮಾಲೀಕತ್ವದ ವಿನಯ್ ಡೇರಿಗೆ ಹೋಗಿ ಅಲ್ಲಿರುವ ಜಾನುವಾರುಗಳಿಗೆ ಮೇವು ಹಾಕಿ, ಅವುಗಳ ಮೈ ತಿಕ್ಕಿ, ಸಣ್ಣ ಜಾನುವಾರುಗಳೊಂದಿಗೆ ಕಾಲ ಕಳೆದರು. ರೈತರಾಗಿರುವ ವಿನಯ ಕುಲಕರ್ಣಿ, ನಿನ್ನೆಯಷ್ಟೇ ಮತದಾನ ಪ್ರಕ್ರಿಯೆ ಮುಗಿಸಿ ಇಂದು ಡೇರಿಗೆ ಹೋಗಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments