ಈಶಾನ್ಯ ಭಾರತದ ಎಂಟು ರಾಜ್ಯಗಳಲ್ಲಿ ಅರುಣಾಚಲ ಪ್ರದೇಶವು ಒಂದು. ಇದು ಲೋಕಸಭೆಯಲ್ಲಿ ಎರಡು ಸ್ಥಾನಗಳನ್ನು ಹೊಂದಿದೆ.
ರಾಜ್ಯದಲ್ಲಿ ನಡೆದ ಎರಡು ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತೀವ್ರ ಸ್ಪರ್ಧೆಯೊಡ್ಡಿವೆ. ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಹೊರಬೀಳಲಿದ್ದು, ಲೋಕಸಭೆ ಅಭ್ಯರ್ಥಿಗಳ ಹಣೆಬರಹ ಬಹಿರಂಗವಾಗಲಿದೆ.
ಬಿಜೆಪಿ ಪಕ್ಷದಿಂದ ಕಿರಣ್ ರಿಜ್ಜಿಜು ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಪಕ್ಷದಿಂದ ನಬಾಮ್ ಟುಕಿ ಕಣದಲ್ಲಿದ್ದಾರೆ.
ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಭಾರತೀಯ ಜನತಾ ಪಕ್ಷ ಗೆದ್ದರೆ ಮತ್ತೊಂದು ಸ್ಥಾನವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವಶಕ್ಕೆ ಪಡೆದಿದೆ.
Constituency |
Bhartiya Janata Party |
Congress |
Others |
Status |
Arunachal East |
Kiren Rijiju |
Lowangcha Wanglet |
- |
BJP wins |
Arunachal West |
Tapir Gao |
Nabam Tuki |
- |
BJP wins |
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.