Publish Date: Thu, 23 May 2019 (15:05 IST)
Updated Date: Thu, 23 May 2019 (15:08 IST)
ನವದೆಹಲಿ : ಐತಿಹಾಸಿಕ ಗೆಲುವಿನ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಏಕಾಂಗಿಯಾಗಿ 300 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅವರು, ಸಬ್ ಕಾ ಸಾಥ್ +ಸಬ್ ಕಾ ವಿಕಾಸ್= ಸಬ್ ಕಾ ವಿಶ್ವಾಸ್+ ವಿಜಯೀ ಭಾರತ್ ಎಂದು ಟ್ವೀಟ್ ಮಾಡಿದ್ದಾರೆ. ಗೆಲುವು ಸಾಧಿಸಿದ ಪ್ರಧಾನಿ ಮೋದಿಯವರಿಗೆ ಹಲವರಿಂದ ಶುಭಾಶಯದ ಮಹಾಪೂರವೇ ಹರಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.