Publish Date: Thu, 23 May 2019 (09:28 IST)
Updated Date: Thu, 23 May 2019 (09:31 IST)
ನವದೆಹಲಿ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮೊದಲ ಸುತ್ತಿನ ಮತೆಣಿಕೆ ಮುಕ್ತಾಯವಾಗಿದ್ದು, ಎನ್.ಡಿ.ಎ. ಮುನ್ನಡೆ ಸಾಧಿಸಿದೆ.
ಎನ್.ಡಿ.ಎ. ಈವರೆಗೆ 201ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಪಿಎ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ ಪಕ್ಷಗಳು 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಮುನ್ನಡೆ ಕಾಯ್ದುಕೊಂಡಿದೆ. ದೆಹಲಿಯಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಟಿಆರ್ಎಸ್, ಬಿಹಾರದಲ್ಲಿ ಬಿಜೆಪಿ, ಒಡಿಶಾದಲ್ಲಿ ಬಿಜೆಪಿ, ರಾಜಸ್ತಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ ಮುನ್ನಡೆ ಕಾಯ್ದುಕೊಂಡಿದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.