Select Your Language

Notifications

webdunia
webdunia
webdunia
webdunia

ಆಭರಣ ಪ್ರಿಯರಿಗೆ ಚಿನ್ನದಂತಹ ಸುದ್ದಿ, ಎಷ್ಟಿದೆ ಬೆಲೆ?

ಆಭರಣ ಪ್ರಿಯರಿಗೆ ಚಿನ್ನದಂತಹ ಸುದ್ದಿ, ಎಷ್ಟಿದೆ ಬೆಲೆ?
ಬೆಂಗಳೂರು , ಬುಧವಾರ, 29 ಡಿಸೆಂಬರ್ 2021 (08:53 IST)
ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ  ಸಹ ಇಂದು ಬಂಗಾರದ ಬೆಲೆ ಇಳಿಕೆ ಕಂಡಿದೆ.

ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನಖರೀದಿ ಸುಲಭವಾಗಲಿದೆ.

ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,240 ರೂ. ಇತ್ತು. ಇಂದು 20 ರೂ. ಇಳಿಕೆಯಾಗಿದ್ದು 47,220 ರೂ. ಆಗಿದೆ.

ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ  48,240 ರೂ. ಇತ್ತು. ಇಂದು 20 ರೂ. ಇಳಿಕೆಯಾಗಿದ್ದು, 48,220 ರೂ. ಆಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 49,480 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 45,350 ರೂ. ಇದೆ. ಹಾಗೆಯೇ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

 

 

Share this Story:

Follow Webdunia kannada

ಮುಂದಿನ ಸುದ್ದಿ

ಈ ವರ್ಷದ ಅತ್ಯಂತ ಕಡಿಮೆ ಬೆಲೆಯ ಕಾರು