Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷಕ್ಕೆ ಅರ್ಧ ಕೋಟಿ ಜನರ ಸದಸ್ಯತ್ವ

Webdunia
ಗುರುವಾರ, 23 ಜನವರಿ 2014 (14:22 IST)
PTI
ಆಮ್ ಆದ್ಮಿ ಪಕ್ಷ ದೆಹಲಿ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಅಧಿಕಾರದ ಗದ್ದುಗೆ ಏರಿದೆ ನಂತರ ಅದೃಷ್ಠ ಖುಲಾಯಿಸಿದೆ. ಇದೀಗ ಪಕ್ಷಕ್ಕೆ 50 ಲಕ್ಷ ಸದಸ್ಯರನ್ನು ನೊಂದಾಯಿಸಲಾಗಿದೆ. ಜನೆವರಿ 26 ರೊಳಗೆ 1 ಕೋಟಿ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉತ್ತರಪ್ರದೇಶ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಹರಿಯಾಣಾ ರಾಜ್ಯಗಳಲ್ಲಿ ಹೆಚ್ಚಿನ ಜನರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷ ಮೈ ಭಿ ಆಮ್ ಆದ್ಮಿ ಎನ್ನುವ ಘೋಷಣೆಯಡಿ ಪಕ್ಷದ ಸದಸ್ಯತ್ವ ಭಿಯಾನ ಆರಂಭಿಸಿದ್ದು, 1 ಕೋಟಿ ಸದಸ್ಯರನ್ನು ನೊಂದಾಯಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರಾದ ಗೋಪಾಲ್ ರೈ ಮಾತನಾಡಿ, 33,55,425 ಜನರು ಅರ್ಜಿಗಳನ್ನು ಭರ್ತಿ ಮಾಡಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

10,80,000 ಸದಸ್ಯರು ಎಸ್‌ಎಂಎಸ್ ಕಳುಹಿಸುವ ಮೂಲಕ ಸದಸ್ಯತ್ವ ಪಡೆದಿದ್ದಾರೆ. ಇತರ 645000 ಜನರು ವೆಬ್‌ಸೈಟ್‌ ಮೂಲಕ ಸದಸ್ಯತ್ವ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ 7.3 ಲಕ್ಷ, ದೆಹಲಿಯಲ್ಲಿ 3.6 ಲಕ್ಷ, ಮಹಾರಾಷ್ಟ್ರದಲ್ಲಿ 3.4 ಲಕ್ಷ, ಹರಿಯಾಣಾದಲ್ಲಿ 3.25 ಲಕ್ಷ ಜನ ಪಕ್ಷದ ಸದಸ್ಯತ್ವ ಪಡೆದಿದ್ದಾರೆ.

ತಮಿಳುನಾಡಿನಲ್ಲಿ 2 ಲಕ್ಷ, ಕರ್ನಾಟಕದಲ್ಲಿ ಕೇವಲ 59,000 ಮತ್ತು ಕೇರಳದಲ್ಲಿ 40,000 ಜನತೆ ಮಾತ್ರ ಸದಸ್ಯತ್ವ ಪಡೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಗೋಪಾಲ್ ರೈ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments