Webdunia - Bharat's app for daily news and videos

Install App

ಆಮ್ ಆದ್ಮಿ ಪಕ್ಷದ ನೀತಿಗಳು ಮಾವೋವಾದಿಗಳ ನೀತಿಗಳಂತೆ: ಗಡ್ಕರಿ ಕಿಡಿ

Webdunia
ಬುಧವಾರ, 18 ಡಿಸೆಂಬರ್ 2013 (15:16 IST)
PTI
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮಾವೋಗಳಂತೆ ರಾಜಕೀಯ ಚಿಂತನೆ ಹೊಂದಿದೆ. ಪ್ರಜಾಪ್ರಭುತ್ವವನ್ನು ಬೇರುಮಟ್ಟದಿಂದ ಕಟಟ್ುವ ನೆಪದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹದಗೆಡಿಸುತ್ತಿದೆ ಎಂದು ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಆರೋಪಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ದೆಹಲಿಯಲ್ಲಿ ಸರಕಾರ ರಚಿಸುವ ನೆಪದಲ್ಲಿ ನಡೆಯುತ್ತಿರುವ ಆಪ್ ಪಕ್ಷದ ನಾಟಕಗಳು ಮಾವೋವಾದಿಗಳ ನಾಟಕದಂತೆ ಕಂಡುಬರುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾಗ್ಪುರ್‌ನಿಂದ ಚುನಾವಣೆ ಕಣಕ್ಕೆ ಇಳಿಯಲು ಬಯಸಿದ್ದೀರಾ. ನಿಮ್ಮ ಪ್ರತಿಸ್ಪರ್ಧಿಯಾಗಿ ಆಪ್ ಪಕ್ಷದ ಸದಸ್ಯೆ ಅಂಜಲಿ ದಮಾನಿಯಾ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದ್ರೂ ಚುನಾವಣೆ ಕಣಕ್ಕೆ ಇಳಿಯಬಹುದು ಎಂದು ತಿರುಗೇಟು ನೀಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಚುನಾವಣೆಯಲ್ಲಿ ಬಹುಮತಗಳಿಸಿ ಅಧಿಕಾರದ ಗದ್ದುಗೆಗೆ ಏರಲಿದೆ. ಕಾಂಗ್ರೆಸ್ ಪಕ್ಷ ಹಣದುಬ್ಬರ ಮತ್ತು ಭ್ರಷ್ಟಾಚಾರದಲ್ಲಿ ದಾಖಲೆ ರೂಪಿಸಿದೆ. ಅಭಿವೃದ್ಧಿಯಲ್ಲಿ ಮಹಾರಾಷ್ಟ್ರ ರಾಜ್ಯ ಮಧ್ಯಪ್ರದೇಶ ಮತ್ತು ಗುಜರಾತ್‌ಗಿಂತ ಹಿಂದಿದೆ ಎಂದು ಬಿಜೆಪಿ ಮುಖಂಡ ನಿತಿನ್ ಗಡ್ಕರಿ ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments