Select Your Language

Notifications

webdunia
webdunia
webdunia
webdunia

ಕೆಲ ಬಿಜೆಪಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ: ಆಮ್ ಆದ್ಮಿ

ಕೆಲ ಬಿಜೆಪಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ: ಆಮ್ ಆದ್ಮಿ
ನವದೆಹಲಿ , ಶುಕ್ರವಾರ, 14 ಮಾರ್ಚ್ 2014 (14:10 IST)
PTI
ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಮತ್ತು ಆಮ್ ಆದ್ಮಿ ಪಾರ್ಟಿ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರಿದಿವೆ. ಬಿಜೆಪಿ ನಾಯಕರು ಮಾನಸಿಕವಾಗಿ ದಿವಾಳಿಯಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ವಿರುದ್ಧ ನಡೆದ ಜಯಪ್ರಕಾಶ್ ನಾರಾಯಣ್ ಚಳುವಳಿಯ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳುವುದು ಅಗತ್ಯವಾಗಿದೆ. ಬಿಜೆಪಿ ಮುಖಂಡರು ನಗರಗಳ ನಕ್ಸಲ್‌ರಂತೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಕಳೆದ 1975ರ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ್ ಎರಡು ವರ್ಷಗಳ ಕಾಲ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಜನಸಂಘ ಮತ್ತು ಎಬಿವಿಪಿ ಸಂಘಟನೆಗಳು ಪಾಲ್ಗೊಂಡಿದ್ದವು. ಅರುಣ್ ಜೇಟ್ಲಿ ಕೂಡಾ ಎಬಿವಿಪಿ ಪರವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಒಂದು ವೇಳೆ ರಸ್ತೆಯಲ್ಲಿ ಪ್ರತಿಭಟನೆ ನಡೆಸುವುದು ನಕ್ಸಲ್‌ವಾದಿ ಎನ್ನುವುದಾದರೆ ಜೇಟ್ಲಿ ಕೂಡಾ ಇಂದಿರಾ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣ್ ಅವರ ಕ್ಷಮೆಯಾಚಿಸಲಿ ಎಂದು ತಿಕುಗೇಟು ನೀಡಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಭ್ರಷ್ಟಾಚಾರದಲ್ಲಿ ಎರಡು ಪಕ್ಷಗಳು ಒಂದೇ ನಿಲವನ್ನು ಹೊಂದಿವೆ ಎಂದು ಆಪ್ ಮುಖಂಡ ಸಂಜಯ್ ಸಿಂಗ್ ಲೇವಡಿ ಮಾಡಿದ್ದಾರೆ.

Share this Story:

Follow Webdunia kannada