Webdunia - Bharat's app for daily news and videos

Install App

ಕೇಜ್ರಿವಾಲ್ ಸರಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆಯುವ ಅವಸರವಿಲ್ಲ: ಕಾಂಗ್ರೆಸ್

Webdunia
ಸೋಮವಾರ, 27 ಜನವರಿ 2014 (19:22 IST)
PTI
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂದಕ್ಕೆ ಪಡೆಯುವ ಅವಸರವಿಲ್ಲ. ಆದರೆ, ಸರಕಾರದ ಅಢಳಿತ ರೀತಿ ಮತ್ತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಗ್ಗೆ ಸಚಿವ ಸೋಮನಾಥ್ ಭಾರ್ತಿ ನೀಡಿದ ಹೇಳಿಕೆ ಬೇಸರ ತರಿಸಿದೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡುವ ಸಂದರ್ಭದಲ್ಲಿ ಹಲವು ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಇಂದು ಬೆಂಬಲ ನೀಡಿ ನಾಳೆ ಬೆಂಬಲ ವಾಪಸ್ ಪಡೆಯುವ ಪ್ರಶ್ನೆಯಿಲ್ಲ. ಇಂತಹ ವಿಷಯಗಳನ್ನು ಕಾಂಗ್ರೆಸ್ ಪಕ್ಷ ಲಘುವಾಗಿ ಪರಿಗಣಿಸುವುದಿಲ್ಲ. ತಾಳ್ಮೆಯಿಂದ ನಿರೀಕ್ಷಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಎಐಸಿಸಿ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸಮಯದ ಗಡುವು ನೀಡಿಲ್ಲ. ದೆಹಲಿ ಜನತೆಯ ಮೇಲೆ ಮತ್ತೊಂದು ಚುನಾವಣೆಯ ಹೊರೆ ಹಾಕಬಾರದು ಎನ್ನುವ ಉದ್ದೇಶದಿಂದ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಲಾಗಿದೆ. ಆದರೆ, ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದಲ್ಲಿದ್ದ ವೇಗ ಇದೀಗ ಸರಕಾರ ನಡೆಸುವಾಗ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಲೇವಡಿ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments