Webdunia - Bharat's app for daily news and videos

Install App

ಬಿಜೆಪಿಗೆ ಮೋದಿಯಾದ್ರೆ, ಕಾಂಗ್ರೆಸ್‌ಗೆ ರಾಹುಲ್ ಪ್ರಧಾನಿ ಅಭ್ಯರ್ಥಿ: ವೀರಪ್ಪಾ ಮೊಯ್ಲಿ

Webdunia
ಮಂಗಳವಾರ, 24 ಡಿಸೆಂಬರ್ 2013 (16:05 IST)
PTI
ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಉಹಾಪೋಹಗಳ ಹರಡಿರುವ ಮಧ್ಯೆ, ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಹೆಚ್ಚುವರಿಯಾಗಿ ಪರಿಸರ ಮತ್ತು ಅರಣ್ಯ ಖಾತೆಯನ್ನು ಹೊಂದಿರುವ ಪೆಟ್ರೋಲಿಯಂ ಖಾತೆ ಸಚಿವ ವೀರಪ್ಪಾ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ.

ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಜಯಂತಿ ನಟರಾಜನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಖಾತೆ ಮೊಯ್ಲಿ ಪಾಲಾಗಿದೆ

ಜಯಂತಿ ನಟರಾಜನ್ ಪರಿಸರ ಮತ್ತು ಅರಣ್ಯ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ತೆಗೆದುಹಾಕಲಾಗಿದೆ ಎನ್ನುವ ಆರೋಪಗಳನ್ನು ಮೊಯ್ಲಿ ತಳ್ಳಿಹಾಕಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೇವಲ ಮಾತನಾಡುತ್ತಾರೆ. ಆದರೆ, ಕಾಂಗ್ರೆಸ್ಸಿಗರು ನೀಡಿದ ಭರವಸೆಗಳನ್ನು ಜಾರಿಗೆ ತರುತ್ತಾರೆ ಎಂದು ಬಿಜೆಪಿ ಪಾಳಯಕ್ಕೆ ತಿರುಗೇಟು ನೀಡಿದ್ದಾರೆ.

ಮಾಜಿ ಸಚಿವೆ ಜಯಂತಿ ನಟರಾಜನ್ ಮಾತನಾಡಿ, ಪಕ್ಷದ ಸಂಘಟನೆಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಹರಡುತ್ತಿರುವ ವರದಿಗಳು ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments