Select Your Language

Notifications

webdunia
webdunia
webdunia
webdunia

ಬಿಜೆಪಿಗೆ ರಾಷ್ಟ್ರದ ಚಿಂತೆ, ಕಾಂಗ್ರೆಸ್ ಪಕ್ಷಕ್ಕೆ ರಾಜಪರಂಪರೆ ಉಳಿಸುವ ಚಿಂತೆ: ಮೋದಿ ಲೇವಡಿ

ಬಿಜೆಪಿಗೆ ರಾಷ್ಟ್ರದ ಚಿಂತೆ, ಕಾಂಗ್ರೆಸ್ ಪಕ್ಷಕ್ಕೆ ರಾಜಪರಂಪರೆ ಉಳಿಸುವ ಚಿಂತೆ: ಮೋದಿ ಲೇವಡಿ
ನವದೆಹಲಿ , ಸೋಮವಾರ, 20 ಜನವರಿ 2014 (14:10 IST)
PR
ಬಿಜೆಪಿ ಪಕ್ಷ ರಾಷ್ಟ್ರೀಯತೆಯ ಬಗ್ಗೆ ಚಿಂತನೆ ನಡೆಸಿದ್ದರೆ ಕಾಂಗ್ರೆಸ್ ಪಕ್ಷ ರಾಜಪರಂಪರೆ ಬಗ್ಗೆ ಚಿಂತನೆ ನಡೆಸಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನುಭವಿಸುವುದನ್ನು ಅರಿತ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪುತ್ರನನ್ನು ಬಲಿಪಶುವಾಗಿಸಲು ಸಿದ್ದರಿಲ್ಲ ಎಂದು ಲೇವಡಿ ಮಾಡಿದ್ದಾರೆ.

ರಾಮಲೀಲಾ ಮೈದಾನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಚಿಂತನೆ ರಾಷ್ಟ್ರೀಯತೆ ಕಾಂಗ್ರೆಸ್ ಚಿಂತನೆ ರಾಜಪರಂಪರೆಯದ್ದು ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷದ ಟೀ ಮಾರಾಟಗಾರ ಎನ್ನುವ ಲೇವಡಿಗೆ ತಿರುಗೇಟು ನೀಡಿದ ಮೋದಿ, ಟೀ ಮಾರಾಟಗಾರನೊಬ್ಬ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದು ಎಲ್ಲಾ ಟೀ ಮಾರಾಟಗಾರರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಶ್ರೀಮಂತ ಕುಟುಂಬದಲ್ಲಿ ಹುಟ್ಟಿದ ರಾಹುಲ್ ಗಾಂಧಿ ಟೀ ಮಾರಾಟಗಾರನ ಎದುರು ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವುದು ಅವರ ಉಳಿಗಮಾನ್ಯ ಪದ್ದತಿಯ ಚಿಂತನೆಯನ್ನು ಎತ್ತಿ ತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಚುನಾವಣೆಯಲ್ಲಿ ಜಯಗಳಿಸಿದ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡಬೇಕೆ ಹೊರತು ಆರಂಭದಲ್ಲಿಯೇ ಪ್ರಧಾನಿ ಆಯ್ಕೆ ಮಾಡುವುದು ಸರಿಯಲ್ಲ ಎನ್ನುವ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು, 1984ರಲ್ಲಿ ಇಂದಿರಾ ಗಾಂಧಿ ಹತ್ಯೆಯಾದಾಗ ರಾಜೀವ್ ಗಾಂಧಿಯವರನ್ನು ಪ್ರಧಾನಿಯನ್ನಾಗಿ ಘೋಷಿಸಲಾಯಿತು. ಆ ಸಂದರ್ಭದಲ್ಲಿ ಸಂಸದರು ಆಯ್ಕೆ ಮಾಡಿದ್ದರೇ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

Share this Story:

Follow Webdunia kannada