Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯೂಫಿಲ್ಮ್ ತೆಗೆದ ಪೊಲೀಸ್ ಪೇದೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯೂಫಿಲ್ಮ್ ತೆಗೆದ ಪೊಲೀಸ್ ಪೇದೆ
ಗಾಜಿಯಾಬಾದ್ , ಶನಿವಾರ, 5 ಏಪ್ರಿಲ್ 2014 (13:48 IST)
ಆಘಾತಕಾರಿ ಘಟನೆಯೊಂದರಲ್ಲಿ ಪೊಲೀಸ್ ಪೇದೆ ಸೇರಿದಂತೆ ಮೂವರು ವ್ಯಕ್ತಿಗಳು 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೇ ಬ್ಲ್ಯೂಫಿಲ್ಮ್ ಮಾಡಿದ ಹೇಯ ಘಟನೆ ವರದಿಯಾಗಿದೆ.


ನಗರದ ಮೋದಿನಗರದ ನಿವಾಸಿಯಾದ ವಿದ್ಯಾರ್ಥಿನಿ ಟ್ಯೂಶನ್‌ ಮುಗಿಸಿ ಮನೆಗೆ ಮರಳುತ್ತಿರುವಾಗ ನೆರೆಮನೆಯ ನಿವಾಸಿಯಾದ ಕರಣ್ ಎಂಬಾತ ಆಕೆಯನ್ನು ಒತ್ತಾಯಪೂರ್ವಕವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ತನ್ನ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಲ್ಲದೇ ಅದರ ವಿಡಿಯೋ ಚಿತ್ರಣ ಕೂಡಾ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆರೋಪಿ ಪೊಲೀಸ್ ಪೇದೆ ಫೈಜಾಬಾದ್‌ನ ಪೊಲೀಸ್ ಠಾಣೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದಾನೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada