Select Your Language

Notifications

webdunia
webdunia
webdunia
webdunia

ಅರವಿಂದ್ ಕೇಜ್ರಿವಾಲ್ ಪಕ್ಷಕ್ಕೆ 40 ವಿದೇಶಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬೆಂಬಲ

ಅರವಿಂದ್ ಕೇಜ್ರಿವಾಲ್ ಪಕ್ಷಕ್ಕೆ 40 ವಿದೇಶಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಬೆಂಬಲ
ವಾಷಿಂಗ್ಟನ್ , ಶುಕ್ರವಾರ, 8 ನವೆಂಬರ್ 2013 (14:54 IST)
PTI
ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಕ್ಷದ ಪರ ಪ್ರಚಾರ ನಡೆಸಲು ಅಮೆರಿಕ, ಕೆನಡಾ, ಬ್ರಿಟನ್, ಹಂಗೇರಿ ಮತ್ತು ಸಿಂಗಾಪೂರ್ ದೇಶಗಳ 40 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದಾರೆ ಎಂದು ಆಪ್ ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ಮೇ ತಿಂಗಳಲ್ಲಿ ಆರಂಭವಾದ ಸಂಪರ್ಕ ಸೇತುವೇ ಇದೀಗ ವಿದೇಶಗಳ 40 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಗೆ ವ್ಯಾಪಿಸಿವೆ. ವಿದ್ಯಾರ್ಥಿಗಳು ಪಕ್ಷಕ್ಕೆ ಹಣಕಾಸಿನ ನೆರವು ಕೂಡಾ ನೀಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದೇಶದಲ್ಲಿನ ಭ್ರಷ್ಟಾಚಾರವನ್ನು ಹೊಗಲಾಡಿಸಿ ಜನಸಾಮಾನ್ಯರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರಿಂದ ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಆಕರ್ಷಿತರಾಗಿದ್ದಾರೆ. ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬೆಂಬಲಕ್ಕೆ ಯುವ ಸೇನೆ ಸನ್ನದ್ಧವಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಲ್ಲದೇ ಆರ್ಥಿಕ ನೆರವು ನೀಡುತ್ತಿದ್ದಾರೆ. ವಿದ್ಯರ್ಥಿಗಳಲ್ಲಿ ಬಹುತೇಕರು ಪದವಿಧರರಾಗಿದ್ದಾರೆ.

ಚುನಾವಣೆಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರಿಂದ ಮತ್ತಷ್ಟು ಮತದಾರರಿಗೆ ಸಂದೇಶಗಳನ್ನು ಸಾರಲು ಸಾಧ್ಯವಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Share this Story:

Follow Webdunia kannada