Select Your Language

Notifications

webdunia
webdunia
webdunia
webdunia

ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಕೇಜ್ರಿವಾಲ್ ಎಚ್ಚರಿಕೆ

ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಕೇಜ್ರಿವಾಲ್ ಎಚ್ಚರಿಕೆ
ನವದೆಹಲಿ , ಶನಿವಾರ, 21 ಡಿಸೆಂಬರ್ 2013 (13:15 IST)
PTI
ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕಿಂತ ಉತ್ತಮ ಸರಕಾರ ನೀಡುವ ವಿಶ್ವಾಸವಿದೆ ಎಂದು ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ತಾಕತ್ತಿದ್ರೆ ರಾಜಕೀಯ ಪ್ರವೇಶಿಸಿ ಚುನಾವಣೆಯಲ್ಲಿ ಗೆದ್ದು ತೋರಿಸಿ ಎಂದು ಸವಾಲ್ ಹಾಕಿದ್ದರು. ವಿಧಾನಸಭೆ ಚುನಾವಣೆಯಲ್ಲಿ 28 ಆಪ್ ಪಕ್ಷದ ಸದಸ್ಯರು ಆಯ್ಕೆಯಾಗಿ ತೋರಿಸಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಿದ್ರೆ ಪ್ರಬಲವಾದ ತಿರುಗೇಟು ನೀಡಲು ಸಿದ್ದವಿದೆ ಎಂದು ಎಚ್ಚರಿಸಿದ್ದಾರೆ.

ದೆಹಲಿ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅಧಿಕಾರ ನಡೆಸಿವೆ. ರಾಷ್ಟ್ರೀಯ ಪಕ್ಷಗಳಿಗಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸಿ ತೋರಿಸುತ್ತೇವೆ ಎಂದು ಆಪ್ ಮುಖಂಡ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.

Share this Story:

Follow Webdunia kannada