Select Your Language

Notifications

webdunia
webdunia
webdunia
webdunia

ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯಿಂದಲೇ ಅತ್ಯಾಚಾರ

ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯಿಂದಲೇ ಅತ್ಯಾಚಾರ
ಇಂದೋರ್ , ಮಂಗಳವಾರ, 1 ಏಪ್ರಿಲ್ 2014 (11:04 IST)
ಕಳೆದ ನಾಲ್ಕು ತಿಂಗಳುಗಳಿಂದ ನಿರಂತರವಾಗಿ ಇಬ್ಬರು ಪುತ್ರಿಯರ ಮೇಲೆ ಅತ್ಯಾಚಾರವೆಸಗಿದ 53 ವರ್ಷ ವಯಸ್ಸಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪುತ್ರಿಯರು ತಂದೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರಿಂದ ಇಂದೋರ್‌ನ ಖಂಜರಾನಾ ಗ್ರಾಮದ ನಿವಾಸಿಯಾದ ಶೇಖ್ ಮೊಹಮ್ಮದ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

12 ಮತ್ತು 13 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕಿಯರು, ತಂದೆ ತಮ್ಮ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ತಾಯಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ತಿಳಿಸಿದಲ್ಲಿ ಮೂವರನ್ನು ಹತ್ಯೆ ಮಾಡುವುದಾಗಿ ಆರೋಪಿ ಮೊಹಮ್ಮದ್ ಬೆದರಿಕೆಯೊಡ್ಡಿದ್ದನು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada