Webdunia - Bharat's app for daily news and videos

Install App

ಉಗ್ರವಾದ ಸ್ವೀಕಾರ್ಹವಲ್ಲ: ಪಾಕ್‌ಗೆ ಪ್ರಣಬ್ ಕಠಿಣ ಸಂದೇಶ ರವಾನೆ

Webdunia
ಶುಕ್ರವಾರ, 4 ಅಕ್ಟೋಬರ್ 2013 (16:11 IST)
PTI
ಪಾಕಿಸ್ತಾನದೊಂದಿಗೆ ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಅದಕ್ಕಾಗಿ ದೇಶದ ಏಕತೆಯೊಂದಿಗೆ ರಾಜಿಯಿಲ್ಲ. ಪಾಕ್ ಸರಕಾರ ಪ್ರಾಯೋಜಿತ ಭಯೋತ್ಪಾದನೆ ಸಮ್ಮತಾರ್ಹವಲ್ಲ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ಉಗ್ರರ ಕೃತ್ಯಗಳಿಗೆ ಪಾಕ್ ಹೊಣೆಯಲ್ಲ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ ಪ್ರಣಬ್ ಉಗ್ರರು ಸ್ವರ್ಗದಿಂದ ಬಂದು ಭಾರತದ ಮೇಲೆ ದಾಳಿ ಮಾಡುತ್ತಿಲ್ಲ. ಉಗ್ರರು ಪಾಕ್ ದೇಶದ ಮೂಲದವರು ಎನ್ನುವುದು ಜಗತ್ತಿಗೆ ತಿಳಿದಿದೆ ಎಂದರು.

ಪಾಕಿಸ್ತಾನದಲ್ಲಿರುವ ಉಗ್ರರ ಶಿಬಿರಗಳನ್ನು ನಾಶಪಡಿಸುವತ್ತ ಪಾಕ್ ಸರಕಾರ ಗಮನಹರಿಸಬೇಕಾಗಿದೆ. ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಭಾರತ ಹಲವು ಬಾರಿ ಒತ್ತಾಯಿಸಿದೆ ಎಂದು ಸ್ಪಷ್ಟಪಡಿಸಿದರು.

ಭಾರತ ನೆರೆಹೊರೆಯ ರಾಷ್ಟ್ರಗಳ ಭೂಮಿಯನ್ನು ಕಬಳಿಸುವ ಯಾವುದೇ ಉದ್ದೇಶ ಹೊಂದಿಲ್ಲ. ದೇಶದ ಏಕತೆಯನ್ನು ಕಾಪಾಡಿಕೊಂಡು ನೆರೆ ರಾಷ್ಟ್ರಗಳೊಂದಿಗೆ ಶಾಂತಿಯನ್ನು ಬಯಸುತ್ತದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments