Select Your Language

Notifications

webdunia
webdunia
webdunia
webdunia

ಕರಾಳ ರಾತ್ರಿ : ಒಂದೇ ರಾತ್ರಿಯಲ್ಲಿ ರೇಪ್ ಮತ್ತು ಗ್ಯಾಂಗ್‌ರೇಪ್‌ಗೊಳಗಾದ ಯುವತಿ

ಕರಾಳ ರಾತ್ರಿ : ಒಂದೇ ರಾತ್ರಿಯಲ್ಲಿ ರೇಪ್ ಮತ್ತು ಗ್ಯಾಂಗ್‌ರೇಪ್‌ಗೊಳಗಾದ ಯುವತಿ
ಕರೈಕಲ್ , ಶನಿವಾರ, 5 ಏಪ್ರಿಲ್ 2014 (13:18 IST)
ಆಘಾತಕಾರಿ ಘಟನೆಯೊಂದರಲ್ಲಿ ಮೂವರು ವ್ಯಕ್ತಿಗಳು 21 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ. ನಂತರ ಕೆಲವೇ ನಿಮಿಷಗಳಲ್ಲಿ ಮತ್ತೊಂಗು ಯುವಕರ ಗುಂಪು ಯುವತಿಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಪ್ರಕರಣ ವರದಿಯಾಗಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಮಂದಿ ಆರೋಪಿಗಳನ್ನು ಬಂಧಿಸಿದ್ದು,ಒಬ್ಬ ಅಪ್ರಾಪ್ತ ವಯಸ್ಸಿನ ಬಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪುದುಚೇರಿ ಪೊಲೀಸರು ತಿಳಿಸಿದ್ದಾರೆ.

ಕ್ರಿಸಮಸ್ ಹಬ್ಬದ ಸಂಭ್ರಮಾಚರಣೆ ನಿಮಿತ್ತ ತನ್ನ ಗೆಳತಿಯೊಂದಿಗೆ ತೆರಳಿದ್ದ ಯುವತಿ ತನ್ನ ಬಾಯ್‌ಫ್ರೆಂಡ್‌ಗಾಗಿ ಕಾಯುತ್ತಿರುವಾಗ ಮೂವರು ಆರೋಪಿಗಳು ಯುವತಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದಾಗ ಆರೋಪಿಯೊಬ್ಬ ಅತ್ಯಾಚಾರವೆಸಗಿದ್ದಾನೆ.

ಯುವತಿಯ ಮೇಲೆ ಅತ್ಯಾಚಾರವೆಸಗಿ ಆರೋಪಿಗಳು ಪರಾರಿಯಾದ ನಂತರ ಮತ್ತೊಂದು ಯುವಕರ ಗುಂಪು ಆಕೆಯನ್ನು ಅಪಹರಿಸಿ ಮತ್ತೊಂದು ಸ್ಥಳಕ್ಕೆ ಕರೆದುಕೊಂಡು ಗ್ಯಾಂಗ್‌ರೇಪ್ ಎಸಗಿದೆ.

ಅತ್ಯಾಚಾರಗೊಳಗಾದ ಯುವತಿಯ ಗೆಳತಿ ಮತ್ತು ಆಕೆಯ ಬಾಯ್‌ಫ್ರೆಂಡ್ ಆರೋಪಿಗಳೊಂದಿಗೆ ವಾಗ್ವಾದದಲ್ಲಿ ತೊಡಗಿದಾಗ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮತ್ತಷ್ಟು ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೋನಿಕಾ ಭಾರಧ್ವಾಜ್ ತಿಳಿಸಿದ್ದಾರೆ.

Share this Story:

Follow Webdunia kannada