Webdunia - Bharat's app for daily news and videos

Install App

ಕೇಂದ್ರ ಸರಕಾರದ ಕುಮ್ಮಕ್ಕಿನಿಂದ ರಾಮದೇವ್ ವಿರುದ್ಧ ಪ್ರಕರಣ ದಾಖಲು;ಬಿಜೆಪಿ

Webdunia
ಶುಕ್ರವಾರ, 22 ನವೆಂಬರ್ 2013 (13:11 IST)
PTI
ಕೇಂದ್ರ ಸರಕಾರದ ಕುಮ್ಮಕ್ಕಿನ ಮೇರೆಗೆ ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಭೂಕಬಳಿಕೆಯಂತಹ 81 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಉತ್ತರಾಖಂಡ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಆರೋಪಿಸಿದೆ.

ವಿದೇಶಿ ಬ್ಯಾಂಕ್‌ಗಳಲ್ಲಿರುವ ಕಪ್ಪು ಹಣ ದೇಶಕ್ಕೆ ಮರಳಿ ತರುವಂತೆ ಒತ್ತಾಯಿಸಿರುವುದು ಮತ್ತು ಭ್ರಷ್ಟಾಚಾರದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದರಿಂದ ಬಾಬಾ ರಾಮದೇವ್ ಅವರನ್ನು ಕಾನೂನಿನ ಬಲೆಯಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ನಾಯಕ ಅಜಯ್ ಭಟ್ ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಾಬಾ ರಾಮದೇವ್ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿವೆ. ಸೂಕ್ತವಾದ ಕಾರಣಗಳಿಲ್ಲದೇ ಸಾಧುಗಳ ಮತ್ತು ದೇಶಭಕ್ತರನ್ನು ಅಪಮಾನಿಸುವದನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ವಿಜಯ್ ಬಹುಗುಣ ಹರಿದ್ವಾರಕ್ಕೆ ತೆರಳಿ ಬಾಬಾ ರಾಮದೇವ್ ವಿರುದ್ಧ ಭೂಕಬಳಿಕೆ ಆರೋಪಗಳ 81 ಪ್ರಕರಣಗಳನ್ನು ದಾಖಲಿಸಿರುವುದನ್ನು ನೋಡಿದಲ್ಲಿ ಇದರ ಹಿಂದಿನ ರಾಜಕೀಯ ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ಮುಖಂಡ ಭಟ್ ಕಿಡಿಕಾರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments