Webdunia - Bharat's app for daily news and videos

Install App

ತಮಿಳುನಾಡಿಗೆ ಮತ್ತೆ ನಾನೇ ಮುಖ್ಯಮಂತ್ರಿ: ಕರುಣಾನಿಧಿ

Webdunia
ಸೋಮವಾರ, 28 ಫೆಬ್ರವರಿ 2011 (10:44 IST)
ಉತ್ತರಾಧಿಕಾರಕ್ಕಾಗಿ ಕಿತ್ತಾಡುತ್ತಿರುವ ಮಕ್ಕಳನ್ನು ಸಮಾಧಾನಗೊಳಿಸಲು ವಿಫಲವಾಗಿರುವ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ, ಮುಂದಿನ ಐದು ವರ್ಷಗಳ ಕಾಲ ತಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಹೇಳುವ ಮೂಲಕ ನಿವೃತ್ತಿ ಯೋಜನೆಗಳನ್ನು ಬದಿಗೊತ್ತಿರುವ ಸಂದೇಶಗಳನ್ನು ರವಾನಿಸಿದ್ದಾರೆ.

ಮುಂದಿನ ಆರು ವರ್ಷಗಳ ಅವಧಿಯಲ್ಲಿ ತಮಿಳುನಾಡಿನ ಎಲ್ಲಾ ಗುಡಿಸಲುಗಳನ್ನು ಕಾಂಕ್ರೀಟ್ ಮನೆಗಳನ್ನಾಗಿ ಪರಿವರ್ತನೆ ಮಾಡಲಾಗುತ್ತದೆ. ನಾನು ಅಲ್ಲೇ (ಮುಖ್ಯಮಂತ್ರಿ ಕಚೇರಿಯಲ್ಲಿ) ಇರಲಿದ್ದೇನಾ ಎಂಬುದು ನಿಮ್ಮ ಪ್ರಶ್ನೆಯಾಗಿದ್ದರೆ, ಹೌದು; ನಾನು ಮತ್ತು ಡಿಎಂಕೆ ಆಡಳಿತವು ಮುಂದುವರಿಯಲಿದೆ ಎಂದು ಜಯಲಲಿತಾ ಅವರ ಎಐಎಡಿಎಂಕೆ ತೊರೆದು ಡಿಎಂಕೆಗೆ ಸೇರ್ಪಡೆಗೊಂಡ ಮುಖಂಡರೊಬ್ಬರನ್ನು ಸ್ವಾಗತಿಸುತ್ತಾ ತಿಳಿಸಿದರು.

ಕಲೈಂಜ್ಞಾರ್ ವಸತಿ ಯೋಜನೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ರಾಜ್ಯದ ಗ್ರಾಮಾಂತರ ಪ್ರದೇಶಗಳು ಮತ್ತು ಪಟ್ಟಣಗಳ ಎಲ್ಲಾ ಗುಡಿಸಲುಗಳನ್ನು ಕಾಂಕ್ರೀಟೀಕರಣಕ್ಕೊಳಪಡಿಸುವ ಭರವಸೆ ನೀಡಿದರು. ಈ ಹಿಂದೆ ಪ್ರತಿ ಮನೆಗೂ ಕಲರ್ ಟಿವಿ, ಬಡವರಿಗೆ ಅಕ್ಕಿ ಮುಂತಾದ ಜನಪರ ಯೋಜನೆಗಳನ್ನು ಪ್ರಕಟಿಸಿ, ಜಾರಿಗೆ ತಂದಿರುವುದನ್ನು ಇದೇ ಸಂದರ್ಭದಲ್ಲಿ ಅವರು ನೆನಪಿಸಿದರು.

ಕರುಣಾನಿಧಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ವತಃ ಅವರ ಪುತ್ರ ಮತ್ತು ಉಪ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ ಉಲ್ಲೇಖಿಸಿದರು. ಮುಂಬರುವ ಚುನಾವಣೆಯಲ್ಲಿ ಡಿಎಂಕೆ ಜಯಭೇರಿ ಬಾರಿಸಲಿದೆ ಎಂದರು.

ಅತ್ತ ಮಧುರೆಯಲ್ಲಿ ಸಾರ್ವಜನಿಕ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಕೂಡ ಇದೇ ಮಾತನ್ನು ಹೇಳಿದ್ದಾರೆ. ಕರುಣಾನಿಧಿಯವರ ಜನೋಪಯೋಗಿ ಕಾರ್ಯಗಳಿಂದಾಗಿ ಅವರನ್ನೇ ಮತ್ತೆ ಮುಖ್ಯಮಂತ್ರಿಯನ್ನಾಗಿ ಜನತೆ ಆಯ್ಕೆ ಮಾಡಲಿದ್ದಾರೆ ಎಂದಿದ್ದಾರೆ.

ಅವರ ಯೋಜನೆಗಳಿಗಾಗಿ ಕೇವಲ ಆರನೇ ಬಾರಿ ಮಾತ್ರವಲ್ಲ, ಏಳನೇ ಬಾರಿಯೂ ಮುಖ್ಯಮಂತ್ರಿಯನ್ನಾಗಿ ಜನ ಆರಿಸುತ್ತಾರೆ ಎಂಬ ಭರವಸೆಯಿದೆ ಎಂದರು.

ತಾನು ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗಲು ಬಯಸುತ್ತಿದ್ದೇನೆ ಎಂದು ಕಳೆದೆರಡು ವರ್ಷಗಳಲ್ಲಿ ಹಲವು ಸಮಾರಂಭಗಳಲ್ಲಿ ಕರುಣಾನಿಧಿ ಹೇಳಿಕೊಂಡು ಬಂದಿದ್ದಾರೆ. ಆದರೆ ಅವರ ನಂತರ ಡಿಎಂಕೆ ಉತ್ತರಾಧಿಕಾರಿ ಯಾರು ಎಂಬ ಕುರಿತು ಸ್ಟಾಲಿನ್ ಮತ್ತು ಅಳಗಿರಿಯವರದ್ದು ಭಿನ್ನ ಅಭಿಪ್ರಾಯ. ಸ್ಟಾಲಿನ್ ಉತ್ತರಾಧಿಕಾರಿಯಾಗುವುದು ಅಳಗಿರಿಗೆ ಇಷ್ಟವಿಲ್ಲ.

ಕಳೆದ ತಿಂಗಳಷ್ಟೇ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದ ಕರುಣಾನಿಧಿ, ತಾನು ಮುಖ್ಯಮಂತ್ರಿಯಾಗುವ ಬದಲು ಪಕ್ಷದ ಕಚೇರಿಯಲ್ಲಿ ಕುಳಿತುಕೊಳ್ಳಲು ಬಯಸುತ್ತೇನೆ ಎಂದಿದ್ದರು. ಆದರೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರಲ್ಲಿ ಗೊಂದಲ ಸೃಷ್ಟಿಸಬಾರದು ಎಂಬ ಕಾರಣಕ್ಕೆ ಹಿಂದಿನ ಹೇಳಿಕೆಗಳನ್ನು ತಳ್ಳಿ ಹಾಕಿದ್ದಾರೆ. ತಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

Show comments