Webdunia - Bharat's app for daily news and videos

Install App

ತಮಿಳುನಾಡು-ಹಣದ ಹೊಳೆಗೆ ಕಡಿವಾಣ ಹಾಕಲು ಸಜ್ಜು!

Webdunia
ಭಾನುವಾರ, 6 ಮಾರ್ಚ್ 2011 (09:32 IST)
PTI
ತಮಿಳುನಾಡಿನಲ್ಲಿ ಏಪ್ರಿಲ್ 13ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಹರಿಸುವ ಹಣದ ಹೊಳೆಯ ಮೇಲೆ ನಿಗಾ ಇಡಲು ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆಯ ಸಹಯೋಗದೊಂದಿಗೆ ಕಾರ್ಯಪ್ರವೃತ್ತವಾಗಲು ನಿರ್ಧರಿಸಿದೆ.

ಆದಾಯ ತೆರಿಗೆ ಇಲಾಖೆಯ ತನಿಖಾ ತಂಡ ಈಗಾಗಲೇ ರಾಜ್ಯದ ಪ್ರತಿ ಜಿಲ್ಲಾವಾರು ತನ್ನ ತಂಡಗಳನ್ನು ನೇಮಕ ಮಾಡಿದ್ದು, ಅವರು ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಮಾಡುವ ಚುನಾವಣಾ ಖರ್ಚಿನ ಮೇಲೆ ಕಣ್ಣಿಡುತ್ತವೆ.

ಮೊದಲ ಬಾರಿಗೆ ಬಿಹಾರ ಚುನಾವಣೆಯಲ್ಲಿ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆಯ ನೆರವನ್ನು ಇದೇ ಸಂಬಂಧದಲ್ಲಿ ಬಳಸಿಕೊಂಡಿತ್ತು. ಅಲ್ಲಿ ಚುನಾವಣಾ ಖರ್ಚಿನ ಬಗ್ಗೆ ತೀವ್ರ ನಿಗಾ ವಹಿಸಿದ್ದರಿಂದ ಆಯೋಗದ ಯೋಜನೆ ಫಲ ನೀಡಿತ್ತು. ಆ ನಿಟ್ಟಿನಲ್ಲಿ ಇದೀಗ ತಮಿಳುನಾಡಿನಲ್ಲಿಯೂ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಹಣ, ವಸ್ತುಗಳ ಹಂಚಿಕೆ ಇತ್ಯಾದಿಗಳ ಬಗ್ಗೆ ಆದಾಯ ತೆರಿಗೆ ತನಿಖಾ ದಳ ನೀಡುವ ವರದಿಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದೆ. ಆದರೆ ಈ ಬಾರಿ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಪ್ರಮುಖ ಪ್ರತಿಪಕ್ಷವಾಗಿರುವ ಎಐಎಡಿಎಂಕೆ ಜಿದ್ದಾಜಿದ್ದಿನ ಹಣಾಹಣಿಗೆ ಇಳಿಯಲಿದೆ. ಪ್ರಸಕ್ತ ಚುನಾವಣೆಯಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ರಾಜಕೀಯ ಪಕ್ಷಗಳು ವ್ಯಯಿಸಲಿವೆ ಎಂಬ ಮಾತು ಕೇಳಿಬರುತ್ತಿದೆ. ಹಾಗಾಗಿ ಆಯೋಗದ ಕ್ರಮ ಎಷ್ಟರ ಮಟ್ಟಿಗೆ ಹಣದ ಹೊಳೆಗೆ ಕಡಿವಾಣ ಹಾಕಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

Show comments