Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

Sampriya
ಗುರುವಾರ, 13 ನವೆಂಬರ್ 2025 (19:15 IST)
Photo Credit X
ನವದೆಹಲಿ: ದೆಹಲಿ ಸ್ಫೋಟ ಮತ್ತು ಫರಿದಾಬಾದ್ ಸ್ಫೋಟಕಗಳ ದಂಧೆಯಲ್ಲಿ ಜೈಶ್-ಎ-ಮೊಹಮ್ಮದ್ ನಂಟು ಕುರಿತು ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಡಾ. ಶಾಹೀನ್ ಸಯೀದ್ ಜೈಶ್ ಕಮಾಂಡರ್ ಮತ್ತು ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಮರ್ ಫಾರೂಕ್ ಅವರ ಪತ್ನಿ ಅಫೀರಾ ಬೀಬಿಯೊಂದಿಗೆ ಸಂಪರ್ಕದಲ್ಲಿರುವ ಬಗ್ಗೆ ಮಹತ್ವದ ಮಾಹಿತಿ ಲಭಿಸಿದೆ. 

2019 ರ ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಜೈಶ್ ಮುಖ್ಯಸ್ಥ ಮಸೂದ್ ಅಜರ್ ಅವರ ಸೋದರಳಿಯ ಉಮರ್ ಫಾರೂಕ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟನು, ಇದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ 40 ಸಿಬ್ಬಂದಿಯನ್ನು ಬಲಿ ತೆಗೆದುಕೊಂಡಿತು.

ಉಮರ್ ಪತ್ನಿ ಅಫಿರಾ ಬೀಬಿ, ಜೈಶ್‌ನ ಹೊಸದಾಗಿ ಪ್ರಾರಂಭಿಸಲಾದ ಮಹಿಳಾ ಬ್ರಿಗೇಡ್ ಜಮಾತ್-ಉಲ್-ಮೊಮಿನಾತ್‌ನ ಪ್ರಮುಖ ಮುಖ ಎಂದು ತಿಳಿದುಬಂದಿದೆ. 

ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಹಿರಿಯ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದ ಶಾಹೀನ ಕಾರಿನಲ್ಲಿ ಅಸಾಲ್ಟ್ ರೈಫಲ್‌ಗಳು ಮತ್ತು ಇತರ ಮದ್ದುಗುಂಡುಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಆಕೆಯನ್ನು ಬಂಧಿಸಲಾಗಿತ್ತು. ಜಮಾತ್-ಉಲ್-ಮೊಮಿನಾತ್‌ನ ವಿಭಾಗವನ್ನು ಭಾರತದಲ್ಲಿ ಸ್ಥಾಪಿಸುವ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಮಹಿಳೆಯರನ್ನು ನೇಮಿಸುವ ಕೆಲಸವನ್ನು ಆಕೆಗೆ ವಹಿಸಲಾಗಿತ್ತು ಎಂದು ತನಿಖೆಯಿಂದ ಇದೀಗ ಬಹಿರಂಗವಾಗಿದೆ. 


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments