Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿಗೆ ಎತ್ತಂಗಡಿ: ರಾಜನಾಥ್ ಸಿಂಗ್‌ಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ

ನರೇಂದ್ರ ಮೋದಿಗೆ ಎತ್ತಂಗಡಿ: ರಾಜನಾಥ್ ಸಿಂಗ್‌ಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ
ನವದೆಹಲಿ , ಸೋಮವಾರ, 30 ಸೆಪ್ಟಂಬರ್ 2013 (13:32 IST)
PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಪಕ್ಷದ ಫ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದರಿಂದ, ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್‌ ಅವರನ್ನು ಆಯ್ಕೆ ಮಾಡಲಾಗಿದೆ.

ರವಿವಾರದಂದು ಸಭೆ ಸೇರಿದ ಬಿಜೆಪಿ ಸಂಸದೀಯ ಸಮಿತಿ ರಾಜನಾಥ್ ಸಿಂಗ್ ಅವರ ಆಯ್ಕೆಯನ್ನು ಅಂತಿಮಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಸದೀಯ ಸಮಿತಿ ಸದಸ್ಯರು ಅವಿರೋಧವಾಗಿ ರಾಜನಾಥ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯದರ್ಶಿ ಅನಂತಕುಮಾರ್ ತಿಳಿಸಿದ್ದಾರೆ.

ಬಿಜೆಪಿ ಪ್ರಚಾರ ಸಮಿತಿಯ ಉಪಸಮಿತಿಗಳು ಮತ್ತು ಹಿರಿಯ ಮುಖಂಡರು ರಾಜನಾಥ್ ಸಿಂಗ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಯುಕ್ತಿಗೊಳಿಸುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಕಳೆದ ಜೂನ್ ತಿಂಗಳಲ್ಲಿ 2014ರ ಲೋಕಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು,

Share this Story:

Follow Webdunia kannada