Webdunia - Bharat's app for daily news and videos

Install App

ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರವಂತೆ!

Webdunia
ಶನಿವಾರ, 7 ಏಪ್ರಿಲ್ 2012 (09:08 IST)
PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಶ್ರೀಕೃಷ್ಣನ ಅವತಾರದಲ್ಲಿ ಸ್ಥಳೀಯ ಪತ್ರಿಕೆಗಳಿಗೆ ಬಿಜೆಪಿ ಜಾಹೀರಾತು ನೀಡಿರುವುದು ಹಲವು ವಿವಾದಗಳಿಗೆ ಕಾರಣವಾಗಿದೆ.

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಜಿಲ್ಲಾಧ್ಯಕ್ಷ ಭರತ್ ಕುಮಾರ್, ಸ್ಥಳೀಯ ಪತ್ರಿಕೆಗಳಿಗೆ ಜಾಹೀರಾತು ನೀಡಿ, ಮೋದಿ ಶ್ರೀ ಕೃಷ್ಣನ ಅವತಾರವಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಆರ್‌.ಸಿ.ಫಾಲ್ದು ಅವರನ್ನು ಅರ್ಜುನನಂತೆ ಮತ್ತು ಪಕ್ಷದ ನಾಯಕರಾದ ವಿಜಯ್ ರೂಪಾನಿ, ಪುರುಷೋತ್ತಮ ರೂಪಾಲಾ ಮತ್ತು ಐ.ಕೆ.ಜಡೇಜಾ ಅವರನ್ನು ಪಾಂಡವರಂತೆ ತೋರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಫಾಲ್ದು ನೇತೃತ್ವದಲ್ಲಿ ಇಂದಿನಿಂದ ಆರಂಭವಾಗಲಿರುವ ಕಿಶನ್ ಯಾತ್ರೆಯನ್ನು ಮುಖ್ಯಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಕೃಷಿ ಉತ್ಪಾದನೆ, ಗುಣಮಟ್ಟವನ್ನು ಹೆಚ್ಚಿಸಲು ವೈಜ್ಞಾನಿಕ ತಂತ್ರಗಳನ್ನು ಬಳಸುವ ನಿಟ್ಟಿನಲ್ಲಿ ರೈತರಿಗೆ ಜಾಗೃತಿಯನ್ನು ಮೂಡಿಸಲು ಬಿಜೆಪಿಯಿಂದ ಕಿಶನ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಯುಪಿಎ ಸರಕಾರದ ರೈತ ವಿರೋಧಿ ನೀತಿಯನ್ನು ಕೂಡಾ ಜನತೆಗೆ ಮಾಹಿತಿ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments