Webdunia - Bharat's app for daily news and videos

Install App

ಪೊಲೀಸರಂತೆ ನಟಿಸಿ ವಿಧುವೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

Webdunia
ಶನಿವಾರ, 5 ಏಪ್ರಿಲ್ 2014 (14:11 IST)
ಇಬ್ಬರು ಕಳ್ಳರು ಸೇರಿದಂತೆ ನಾಲ್ಕು ಮಂದಿ ಆರೋಪಿಗಳು ಪೊಲೀಸರಂತೆ ನಟಿಸಿ 25 ವರ್ಷ ವಯಸ್ಸಿನ ವಿಧುವೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಅತ್ಯಾಚಾರ ಘಟನೆ ನಡೆದು ಹತ್ತುದಿನಗಳ ನಂತರ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಪೊಲೀಸರ ಪ್ರಕಾರ, ಅತ್ಯಾಚಾರಕ್ಕೊಳಗಾದ ಮಹಿಳೆ ಪೆಂಡುರ್ತಿ ಗ್ರಾಮದವಳಾಗಿದ್ದು ಎರಡು ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡಿದ್ದಳು. ಜೀವನೋಪಾಯಕ್ಕಾಗಿ ಅಂಗಡಿಯೊದರಲ್ಲಿ ಕೆಲಸಕ್ಕಿದ್ದಳು ಎನ್ನಲಾಗಿದೆ.

ಕಳೆದ ಜನೆವರಿ 19 ರಂದು ಮಹಿಳೆ ತನ್ನ ಗೆಳತಿಯೊಂದಿಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿರುವಾಗ ಆರೋಪಿಗಳಾದ ಕೆ.ರಾಮಣ್ಣಾ, ಪಿ.ರಮೇಶ್, ಎ.ವರಪ್ರಸಾದ್ ಮತ್ತು ಪಿ.ಮಹೇಶ್ ಅಡ್ಡಗಟ್ಟಿ ಒತ್ತಾಯದಿಂದ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಆಕೆಯ ಗೆಳತಿಯ ಎದುರಿನಲ್ಲೇ ಅತ್ಯಾಚಾರವೆಸಗಿದ್ದಾರೆ.

ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ನಂತರ ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಇಬ್ಬರು ಮಹಿಳೆಯರಿಗೆ ಬೆದರಿಕೆಯೊಡ್ಡಿ ಆರೋಪಿಗಳು ಪರಾರಿಯಾಗಿದ್ದರು.

ರೇಪ್‌ಗೊಳಗಾದ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ನಂತರ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments