Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ರಾಜ್ಯಸಭೆಗೆ ನೇಮಕ: ಮಮತಾ

ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ರಾಜ್ಯಸಭೆಗೆ ನೇಮಕ: ಮಮತಾ
ಕೋಲ್ಕತಾ , ಶನಿವಾರ, 18 ಜನವರಿ 2014 (16:03 IST)
PTI
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಯನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ನೇಮಕ ಮಾಡಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಐವರಿಗೆ ಅವಕಾಶವಿದ್ದು, ಬಾಲಿವುಡ್ ಮಿಥುನ್ ಚಕ್ರವರ್ತಿಯನ್ನು ರಾಜ್ಯಸಭೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಮಮತಾ ಬ್ಯಾನರ್ಜಿ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಹಲವಾರು ವರ್ಷಗಳಿಂದ ಬಾಲಿವುಡ್‌ ಕ್ಷೇತ್ರಕ್ಕೆ ನೀಡಿದ ಸೇವೆ ಮತ್ತು ಅವರ ಸಾಮಾಜಿಕ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಸಭೆಗೆ ನೇಮಕ ಮಾಡಲಾಗಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

Share this Story:

Follow Webdunia kannada