Select Your Language

Notifications

webdunia
webdunia
webdunia
webdunia

ಮೋದಿ ಪ್ರಧಾನಿಯಾಗುವುದು ಯಾವತ್ತಿಗೂ ಸಾಧ್ಯವಿಲ್ಲ; ಲಾಲು ವಿಶ್ವಾಸ

ಮೋದಿ ಪ್ರಧಾನಿಯಾಗುವುದು ಯಾವತ್ತಿಗೂ ಸಾಧ್ಯವಿಲ್ಲ; ಲಾಲು ವಿಶ್ವಾಸ
ಪಾಟ್ನಾ , ಶನಿವಾರ, 27 ಜುಲೈ 2013 (17:00 IST)
PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸುವುದು ಯಾವತ್ತೂ ಸಾಧ್ಯವಿಲ್ಲ ಎಂದು ಬಿಹಾರ್‌ನ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗುವುದು ಸಾಧ್ಯವಿಲ್ಲ. ನನ್ನ ಮಾತಿನ ಮೇಲೆ ನಂಬಿಕೆಯಿಡಿ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಗುಜರಾತ್‌ನಲ್ಲಿ 2002ರಲ್ಲಿ ನಡೆದ ದಂಗೆಯಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ದೇಶದ ಜಾತ್ಯಾತೀತ ಪಕ್ಷಗಳು ಮೋದಿಯನ್ನು ಅಧಿಕಾರಕ್ಕೇರಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗುವ ಎಲ್ಲಾ ಅರ್ಹತೆಗಳಿವೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಿಳಿಸಿದ್ದಾರೆ.

Share this Story:

Follow Webdunia kannada