Webdunia - Bharat's app for daily news and videos

Install App

ಯುಪಿಎ ಸರಕಾರದ ವಿರುದ್ಧ ಮಮತಾ ವಾಗ್ದಾಳಿ

Webdunia
ಶುಕ್ರವಾರ, 5 ಅಕ್ಟೋಬರ್ 2012 (12:07 IST)
PTI
ಆರ್ಥಿಕ ಸುಧಾರಣೆಗಳ ನೆವದಲ್ಲಿ ಕೇಂದ್ರದ ಯುಪಿಎ ಸರಕಾರ ದೇಶದ ಲೂಟಿಗೆ ಮುಂದಾಗಿದೆ ಎಂದು ಆರೋಪಿಸಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ದೇಶದ ಲೂಟಿಯನ್ನು ಸಮರ್ಥಿಸುವ ಸಲುವಾಗಿ ಸರಕಾರ ಸುಳ್ಳುಗಳನ್ನು ಹೇಳುತ್ತಿದೆ ಎಂದು ಆಪಾದಿಸಿದ್ದಾರೆ.

ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಕೇಂದ್ರ ಸರಕಾರ ಮಿತಿ ಹೇರಿರುವುದರಿಂದಾಗಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಮೇಲೆ ಭಾರೀ ಪರಿಣಾಮಗಳುಂಟಾಗಲಿವೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು ಕೇಂದ್ರ ಸರಕಾರ ಬಡ ಶಾಲಾ ಮಕ್ಕಳ ಬಗೆಗೆ ಚಿಂತನೆ ನಡೆಸಿಲ್ಲ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಭಾರೀ ಬೆಲೆ ವಿಧಿಸಲಾಗುತ್ತಿದ್ದು, ಶಾಲೆಗಳಲ್ಲಿನ ಮಧ್ಯಾಹ್ನದ ಊಟ ಸ್ಥಗಿತಗೊಳ್ಳುವ ಅಪಾಯ ಎದುರಾಗಿದೆ. ಶಾಲಾ ಮಕ್ಕಳು ಆಹಾರವಿಲ್ಲದೆಯೇ ಶಾಲೆಗೆ ತೆರಳುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಆರ್ಥಿಕ ಸುಧಾರಣೆಗಳಿಂದ ದೇಶದ ಜನಸಾಮಾನ್ಯರು ಏನನ್ನು ನಿರೀಕ್ಷಿಸಬಹುದು? ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪ್ರಶ್ನಿಸಿರುವ ಮಮತಾ ಬ್ಯಾನರ್ಜಿ, ಆರ್ಥಿಕ ಸುಧಾರಣೆಗಳ ನೆವ‌ದಲ್ಲಿ ದೇಶವನ್ನು ಕೊಳ್ಳೆ ಹೊಡೆಯಲಾಗುತ್ತಿದೆಯಲ್ಲದೆ ಇವನ್ನು ಸಮರ್ಥಿಸುವ ಸಲುವಾಗಿ ಸರಕಾರ ಸುಳ್ಳುಗಳನ್ನು ಪೋಣಿಸುತ್ತಿದೆ ಎಂದು ಟೀಕಿಸಿದ್ದಾರೆ.

ಸದ್ಯ ಜನಸಾಮಾನ್ಯರ ಮೇಲೆ ಹೆಚ್ಚುವರಿ ಪ್ರತೀ ಎಲ್‌ಪಿಜಿ ಸಿಲಿಂಡರ್‌ ಮೇಲೆ 127 ರೂಪಾಯಿಗಳ ಅಧಿಕ ಹೊರೆ ಬೀಳುತ್ತಿದೆ. ಮುಂದಿನ ದಿನಗಳಲ್ಲಿ ಈ ಹೊರೆ ಇನ್ನಷ್ಟು ಹೆಚ್ಚಲಿದೆ. ಕೇಂದ್ರ ಸರಕಾರ ಇಂತಹುದೇ ಇನ್ನಷ್ಟು ಹೆಚ್ಚಿನ ಜನವಿರೋಧಿ ನೀತಿಗಳನ್ನು ಕೈಗೊಳ್ಳಲಿದೆ ಎಂದವರು ಹೇಳಿದ್ದಾರೆ.

ಕೇಂದ್ರ ಸರಕಾರ, ಡೀಸೆಲ್‌, ಸೀಮೆಎಣ್ಣೆ ಹಾಗೂ ಎಲ್‌ಪಿಜಿ ಬೆಲೆಯಲ್ಲಿ ಭಾರೀ ಹೆಚ್ಚಳ ಮಾಡಿದೆ. ಜನರ ಹಿತರಕ್ಷಣೆಗಾಗಿ ತನ್ನ ಹೋರಾಟವನ್ನು ಮುಂದುವರಿಸಲಿರುವುದಾಗಿ ಸಾರಿದ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರಕಾರ ಒಂದಿನಿತೂ ನಾಚಿಕೆಯಿಲ್ಲದೆ ಬಡ ಜನರ ಮೇಲೆ ದಾಳಿ ನಡೆಸುತ್ತಿದೆ. ಇದನ್ನು ತಾನು ಸಹಿಸಲಾರೆ. ಅನ್ಯಾಯ ಹಾಗೂ ದೌರ್ಜನ್ಯದ ವಿರುದ್ಧದ ತನ್ನ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ತನ್ನ ಜೀವನುದುದ್ದಕ್ಕೂ ತಾನು ಹೋರಾಟವನ್ನು ನಡೆಸುತ್ತಾ ಬಂದಿದ್ದು, ಭವಿಷ್ಯದಲ್ಲಿಯೂ ಈ ಹೋರಾಟ ಮುಂದುವರಿಯಲಿದೆ ಎಂದವರು ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಏರ್ಪಟ್ಟ ರ್ಯಾಲಿಯಲ್ಲಿ ಪಾಲ್ಗೊಂಡು ನುಡಿದರು.

ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧದ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಅವರು ಘೋಷಿಸಿದರು.

ಡೈಮಂಡ್‌ ಹಾರ್ಬರ್‌ನಲ್ಲಿ ಮಹಿಳಾ ವಿಶ್ವವಿದ್ಯಾನಿಲಯ, ಫಾಲ್ಟಾದಲ್ಲಿ ವೈದ್ಯಕೀಯ ಕಾಲೇಜು, ಸಂಶೋಧನಾ ಕೇಂದ್ರ ಹಾಗೂ ಆಹಾರ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಕಟಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments