Webdunia - Bharat's app for daily news and videos

Install App

ಯುವಕನನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಯುವತಿಯರು

Webdunia
ಮಂಗಳವಾರ, 1 ಏಪ್ರಿಲ್ 2014 (11:19 IST)
ಯುವಕನನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ ಇಬ್ಬರು ಯುವತಿಯರೇ ಅತ್ಯಾಚಾರವೆಸಗಿದ ವಿಚಿತ್ರ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಲಕ್ಷ್ಮಿ ಚಿತ್ರಮಂದಿರದಲ್ಲಿ ಸಿನೆಮಾ ನೋಡಿಕೊಂಡು ಮನೆಗೆ ತೆರಳುತ್ತಿರುವಾಗ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಇಬ್ಬರು ಯುವತಿಯರು ಒತ್ತಾಯಪೂರ್ವಕವಾಗಿ ನನ್ನನ್ನು ಅಪಹರಿಸಿದ್ದಾರೆ. ಕಾರಿನಲ್ಲಿ ಇಬ್ಬರು ಯುವತಿಯರು ಸೇರಿ ನನಗೆ ಬಿಯರ್ ಕುಡಿಯುವಂತೆ ಒತ್ತಾಯಿಸಿದ್ದಾರೆ. ಕೂಗಿದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಯುವತಿಯರು ಬೆದರಿಸಿದ್ದಾರೆ. ಯುವತಿಯರ ಬೆದರಿಕೆಗೆ ಮಣಿದು ಬಿಯರ್ ಸೇವಿಸಿದ್ದೇನೆ ಎಂದು ಯುವಕನು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಪಠಾನ್‌ಕೋಠ್ ರಸ್ತೆಯಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡ ಹೋದ ನಂತರ ನನ್ನನ್ನು ನಗ್ನವಾಗುವಂತೆ ಒತ್ತಾಯಿಸಿದ್ದಾರೆ.ತಾವು ಕೂಡಾ ಇಬ್ಬರು ನಗ್ನರಾಗಿ ನನ್ನ ಮೇಲೆ ನಿರಂತರವಾಗಿ ಎರಡು ಗಂಟೆಗಳ ಕಾಲ ಅತ್ಯಾಚಾರವೆಸಗಿದ್ದಾರೆ. ಯಾವದೇ ಕಾರಣಕ್ಕೂ ಬಾಟಿ ಬಿಟ್ಟಲ್ಲಿ ರೇಪ್ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಮತ್ತೆ ಅಪಹರಿಸಿದ ಸ್ಥಳಕ್ಕೆ ತಂದುಬಿಟ್ಟಿದ್ದಾರೆ ಎಂದು ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿದ್ದಾನೆ.

ಯುವಕನ ಹೇಳಿಕೆ ಪಡೆದ ಪೊಲೀಸರಿಗೆ ಒಂದು ಕ್ಷಣ ನಂಬಲು ಸಾಧ್ಯವಿಲ್ಲ ನಂತರ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರಿಗೆ ಸತ್ಯಾಂಶ ತಿಳಿದು ಬಂದಿದೆ. ಅತ್ಯಾಚಾರ ನಡೆದ ಸ್ಥಳದಲ್ಲಿ ಕಾಂಡೋಮ್‌ಗಳು ಪತ್ತೆಯಾಗಿವೆ. ಆರೋಪಿಗಳಾದ ಇಬ್ಬರು ಯುವತಿಯರ ಪತ್ತೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ