Select Your Language

Notifications

webdunia
webdunia
webdunia
webdunia

ಲೋಕಸಭೆ ಚುನಾವಣೆ: ಚುನಾವಣಾಧಿಕಾರಿಯಿಂದ 51 ನಾಮಪತ್ರಗಳು ಅಸಿಂಧು

ಲೋಕಸಭೆ ಚುನಾವಣೆ: ಚುನಾವಣಾಧಿಕಾರಿಯಿಂದ 51 ನಾಮಪತ್ರಗಳು ಅಸಿಂಧು
ಬೆಂಗಳೂರು , ಗುರುವಾರ, 27 ಮಾರ್ಚ್ 2014 (20:26 IST)
PR
ರಾಜ್ಯದ 28 ಲೋಕಸಭಾ ಚುನಾವಣಾ ಕ್ಷೇತ್ರಗಳಿಗೆ ಸುಮಾರು 916 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ 51 ನಾಮಪತ್ರ ತಿರಸ್ಕೃತಗೊಂಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಚುನಾವಣಾಧಿಕಾರಿ, ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಹುರಿಯಾಳುಗಳು ನಾಮಪತ್ರ ಸಲ್ಲಿಸಿದ್ದರು. 28 ಕ್ಷೇತ್ರಗಳ ಪೈಕಿ 916 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು,. ಅದರಲ್ಲಿ 51 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದರು.

ಎಲ್ಲಾ ಜಿಲ್ಲೆಗಳ ಪೈಕಿ ಬೀದರ್‌ನಲ್ಲೇ ಒಟ್ಟು 38 ಅಭ್ಯರ್ಥಿಗಳು ಕಣದಲ್ಲಿದ್ದು,. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸದ್ಯ 552 ಅಭ್ಯರ್ಥಿಗಳು ಕಣದಲ್ಲಿದ್ದು, ನಾಮಪತ್ರ ಹಿಂಪಡೆಯಲು ನಾಳೆ ಕೊನೆಯ ದಿನವಾಗಿರುವುದರಿಂದ ಈ ಸಂಖ್ಯೆ ಇಳಿಯುವ ಸಾಧ್ಯತೆಯಿದೆ.

Share this Story:

Follow Webdunia kannada