Webdunia - Bharat's app for daily news and videos

Install App

ವಿದೇಶಿ ರಾಯಭಾರಿಗಳ ಜತೆ ಮಾತಿನಲ್ಲಿ ಎಚ್ಚರಿಕೆ: ಆಂಟನಿ

Webdunia
ಶನಿವಾರ, 19 ಮಾರ್ಚ್ 2011 (08:59 IST)
ವಿಕಿಲೀಕ್ಸ್ ರಹಸ್ಯ ದಾಖಲೆಗಳ ಸತ್ಯಾಸತ್ಯತೆಯ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಲೇ ಮಾತಿಗಿಳಿದಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಕ್ಷಣಾ ಸಚಿವ ಎ.ಕೆ. ಆಂಟನಿ, ವಿದೇಶಗಳು ಮತ್ತು ವಿದೇಶಿ ರಾಯಭಾರಿಗಳ ಜತೆಗಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವಂತೆ ಜನತೆಗೆ ಕರೆ ನೀಡಿದ್ದಾರೆ.

2008 ರಲ್ಲಿ ಎಡಪಕ್ಷಗಳು ಅಮೆರಿಕಾ ಜತೆಗಿನ ಅಣು ಒಪ್ಪಂದ ವಿರೋಧಿಸಿ ಸರಕಾರದಿಂದ ಬೆಂಬಲ ವಾಪಸ್ ಪಡೆದುಕೊಂಡ ನಂತರ ವಿಶ್ವಾಸ ಮತ ಎದುರಾದ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರದ ಬೆಂಬಲಕ್ಕಾಗಿ ಇತರ ಪಕ್ಷಗಳ ಸಂಸದರಿಗೆ ಲಂಚ ನೀಡಿತ್ತು ಎಂದು ವಿಕಿಲೀಕ್ಸ್ ದಾಖಲೆಗಳು ಆರೋಪಿಸಿದ್ದವು.

ಈ ಬಗ್ಗೆ ಮಾತನಾಡಿರುವ ಆಂಟನಿ, ನನ್ನ ಸ್ವಂತ ಅನುಭವದಿಂದ ಹೇಳುವುದಾದರೆ ವಿದೇಶಗಳು ಎಷ್ಟೇ ನಂಬಿಕೆಗೆ ಅರ್ಹವಾದರೂ ಅವುಗಳ ಜತೆ ವ್ಯವಹರಿಸುವಾಗ ನಾವು ಸಾಧ್ಯವಾದಷ್ಟು ಎಚ್ಚರಿಕೆ ವಹಿಸಬೇಕು ಎಂದು ಸೇನೆಯ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯಪಟ್ಟರು.

ವಿಕಿಲೀಕ್ಸ್ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು ಎಂಬ ಪತ್ರಕರ್ತರ ಪ್ರಶ್ನೆಗೆ, ಅದರ ಸತ್ಯಾಸತ್ಯತೆ ಬಗ್ಗೆ ನಾನು ಏನೂ ಹೇಳಲಾರೆ ಎಂದಷ್ಟೇ ಹೇಳಿ ನುಣುಚಿಕೊಂಡರು.

ಕಾಸಿಗಾಗಿ ಓಟು ಹಗರಣವು 2008ರಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಮೂವರು ಬಿಜೆಪಿ ಸಂಸದರು ಸಂಸತ್ತಿನಲ್ಲೇ ನೋಟಿನ ಕಂತೆಗಳನ್ನು ಪ್ರದರ್ಶಿಸಿ, ಇದು ಕಾಂಗ್ರೆಸ್ ಕೊಟ್ಟದ್ದು ಎಂದು ಗಲಾಟೆ ಎಬ್ಬಿಸಿದ್ದರು. ಆದರೆ ಇದನ್ನು ಕಾಂಗ್ರೆಸ್ ಮತ್ತು ಸರಕಾರ ನಿರಾಕರಿಸುತ್ತಲೇ ಬಂದಿತ್ತು. ಈ ಕುರಿತು ನಡೆಸಿದ ತನಿಖೆ ಕೂಡ ಯಾವುದೇ ಮಹತ್ವದ ಫಲಿತಾಂಶ ನೀಡಿರಲಿಲ್ಲ.

ಆದರೆ ಈಗ ವಿಕಿಲೀಕ್ಸ್ ಈ ಕುರಿತು ಹಲವು ವಿಚಾರಗಳನ್ನು ಬಹಿರಂಗಪಡಿಸಿದೆ. 'ಕಾಸಿಗಾಗಿ ಓಟು' ಪ್ರಸಂಗದ ಹಿಂದೆ ಕೆಲಸ ಮಾಡಿದ ಕಾಂಗ್ರೆಸ್ ನಾಯಕರುಗಳ ಹೆಸರುಗಳನ್ನು ಬಿಡುಗಡೆಗೊಳಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಕ್ಷ, ಆರೋಪಗಳನ್ನು ಸಾಬೀತುಪಡಿಸುವಂತೆ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತಿದೆ.

ವಿಕಿಲೀಕ್ಸ್ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅದನ್ನು ನಮ್ಮ ನೆಲದ ಕಾನೂನು ಒಪ್ಪಲು ಕೂಡ ಸಾಧ್ಯವಿಲ್ಲ. ಪ್ರತಿಪಕ್ಷಗಳು ತಮ್ಮ ಲಾಭಕ್ಕಾಗಿ ಕೀಳು ರಾಜಕೀಯ ಮಾಡುತ್ತಿವೆ. ಬಿಜೆಪಿ ಅಥವಾ ಎಡಪಕ್ಷಗಳು ಈ ದಾಖಲೆಗಳನ್ನು ರುಜುವಾತುಪಡಿಸಲಿ. ನಂತರ ನಾವು ನೋಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಸರಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

Show comments