Select Your Language

Notifications

webdunia
webdunia
webdunia
webdunia

ವಿಶ್ವದ ಅತಿ ಎತ್ತರದ ಹಿಂದು ದೇವಾಲಯ ನಿರ್ಮಾಣಕ್ಕೆ ಸಿಎಂ ನಿತೀಶ್ ಚಾಲನೆ

ವಿಶ್ವದ ಅತಿ ಎತ್ತರದ ಹಿಂದು ದೇವಾಲಯ ನಿರ್ಮಾಣಕ್ಕೆ ಸಿಎಂ ನಿತೀಶ್ ಚಾಲನೆ
ಪಾಟ್ನಾ , ಗುರುವಾರ, 14 ನವೆಂಬರ್ 2013 (13:37 IST)
PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿಶ್ವದಲ್ಲಿಯೇ ಅತಿ ಎತ್ತರದ ಮೂರ್ತಿ ಸ್ಥಾಪನೆಗೆ ಚಾಲನೆ ನೀಡಿರುವಂತೆ ಇದೀಗ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡಾ ವಿಶ್ವದಲ್ಲಿಯೇ ಅತಿ ಎತ್ತರದ ಹಿಂದು ದೇವಾಲಯ ನಿರ್ಮಾಣದ ಉದ್ಘಾಟನೆಗೆ ಚಾಲನೆ ನೀಡಿದ್ದಾರೆ.

ಪಾಟ್ನಾದಿಂದ 120 ಕಿ.ಮೀ ದೂರದಲ್ಲಿರುವ ಪೂರ್ವ ಚಂಪಾರಣ್ಯ ಜಿಲ್ಲೆಯ ಕೇಶಾರಿಯಾ ಪ್ರದೇಶದಲ್ಲಿ 2800 ಅಡಿ ಎತ್ತರ ಮತ್ತು 200 ಎಕರೆ ವಿಸ್ತಾರವಾದ ಸ್ಥಳಾವಕಾಶ ಹೊಂದಿರುವ ವಿಶ್ವದಲ್ಲಿಯೇ ಅತಿ ಎತ್ತರವಾದ ಹಿಂದು ದೇವಾಲಯ ನಿರ್ಮಾಣವಾಗುತ್ತಿದೆ.

ವಿಶ್ವದ ಅತಿ ಎತ್ತರದ ಹಿಂದು ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ದ್ವಾರಕಾಪೀಠದ ಜಗದ್ಗುರು ಶಂಕರಾಚಾರ್ಯ, ಮುಖ್ಯಮಂತ್ರಿಗಳು ಹಿಂದಿನ ಕಾಲದ ರಾಜರಿದ್ದಂತೆ. ಮುಖ್ಯಮಂತ್ರಿಗಳು ಬರುತ್ತಾರೆ ಹೋಗುತ್ತಾರೆ. ಆದರೆ ಬಹುವರ್ಷಗಳ ಕಾಲ ನೆನಪಿನಲ್ಲಿಡುವಂತಹ ಕಾರ್ಯಗಳಿಗೆ ಆದ್ಯತೆ ನೀಡಬೇಕು. 1960ರಲ್ಲಿ ಮುಖ್ಯಮಂತ್ರಿಯಾಗಿದ್ದ ಕೆ.ಬಿ. ಸಹಾಯ್ ಪ್ರಭಾವಶಾಲಿ ಮುಖ್ಯಮಂತ್ರಿಯಾಗಿದ್ದರು. ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಜೊತೆ ಇಬ್ಬರು ಬೆಂಬಲಿಗರಿರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ವಿಶ್ವದಲ್ಲಿಯೇ ಅತಿ ಎತ್ತರದ ದೇವಾಲಯ ನಿರ್ಮಾಣ ಮಾಡಬೇಕು ಎನ್ನುವುದು ಮುಖ್ಯಮಂತ್ರಿ ನಿತೀಶ್ ಕುಮಾರ್ ಕನಸಾಗಿದೆ. ಅವರ ಅಧಿಕಾರವಧಿಯಲ್ಲಿಯೇ ದೇವಾಲಯದ ನಿರ್ಮಾಣ ಕಾರ್ಯ ಮುಕ್ತಾಯಗೊಳ್ಳಲಿದೆ ಎಂದು ಜಗದ್ಗುರು ಶಂಕರಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada