Webdunia - Bharat's app for daily news and videos

Install App

ವಿ.ಕ. ಸಮ್ಮೇಳನಕ್ಕೆ ಹೋದ್ರೆ ಜಾಗ್ರತೆ: ಐಶ್ವರ್ಯಾ ರೈಗೆ ಠಾಕ್ರೆ

Webdunia
ಶುಕ್ರವಾರ, 11 ಮಾರ್ಚ್ 2011 (11:45 IST)
ಬೆಳಗಾವಿಯಲ್ಲಿ ನಡೆಯುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸದಂತೆ ಕನ್ನಡ ಕುವರಿ ಐಶ್ವರ್ಯಾ ರೈಗೆ ಶಿವಸೇನೆಯ ವರಿಷ್ಠ ಬಾಳಾ ಠಾಕ್ರೆ ಬೆದರಿಕೆ ಹಾಕಿದ್ದಾರೆ. ಸಮ್ಮೇಳನದಲ್ಲಿ ಭಾಗವಹಿಸಿದ್ದೇ ಆದರೆ, ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಅವರು ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಬೆಳಗಾವಿ ವಿವಾದಿತ ಪ್ರದೇಶ. ಹಾಗಾಗಿ ಅಲ್ಲಿ ನಡೆಯುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮಹಾರಾಷ್ಟ್ರ ನಿವಾಸಿ ಐಶ್ವರ್ಯಾ ರೈ ಭಾಗವಹಿಸಬಾರದು. ಹಿಂದಿ ಚಿತ್ರರಂಗದಲ್ಲಿ ನೆಲೆ ಪಡೆದುಕೊಂಡಿರುವ ಅವರು ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡರೆ, ಅದರಿಂದ ಮರಾಠಿಗರಿಗೆ ತೀವ್ರ ನೋವಾಗುತ್ತದೆ ಎಂದು ಠಾಕ್ರೆ ಹೇಳಿದ್ದಾರೆ.

ವಿಶ್ವ ಕನ್ನಡ ಸಮ್ಮೇಳನ ಗಡಿನಾಡು ಬೆಳಗಾವಿಯಲ್ಲಿ ನಡೆಯುತ್ತಿರುವುದೇ ಮರಾಠಿಗರಿಗೆ ನೋವು ತರುವ ವಿಚಾರ. ಹಾಗಾಗಿ ನೀವು ಅದರಲ್ಲಿ ಪಾಲ್ಗೊಳ್ಳಬಾರದು ಎಂದು ಠಾಕ್ರೆ ಬೆದರಿಕೆ ಹಾಕಿದ್ದಾರೆ. ಆದರೆ ಇದನ್ನು ಐಶ್ವರ್ಯಾ ರೈ ಲೆಕ್ಕಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.

ಠಾಕ್ರೆಯ ಕಿಡಿನುಡಿಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗರು ವಿಶ್ವ ಕನ್ನಡ ಸಮ್ಮೇಳನವನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ ಎಂದರು.

ಕೆಲ ದಿನಗಳ ಹಿಂದಷ್ಟೇ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ್ದ ಐಶ್ವರ್ಯಾ ರೈ, ನಾನು ಕನ್ನಡದ ಹುಡುಗಿ; ಕರ್ನಾಟಕದ ಮಗಳು. ಮಹಾರಾಷ್ಟ್ರದ ಸೊಸೆ. ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ್ದರು.

ಇಂದು ಸಂಜೆ ಉದ್ಘಾಟನೆಗೊಳ್ಳಲಿರುವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಐಶ್ವರ್ಯಾ ರೈ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿನ ರಾಣಿ ಚೆನ್ನಮ್ಮ ವೇದಿಕೆಯಲ್ಲಿ ಸಂಜೆ 5 ಗಂಟೆಗೆ ಇನ್ಫೋಸಿಸ್ ಅಧ್ಯಕ್ಷ ಎನ್.ಆರ್. ನಾರಾಯಣ ಮೂರ್ತಿಯವರಿಂದ ಸಮ್ಮೇಳನಕ್ಕೆ ಚಾಲನೆ ದೊರಕಲಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

Show comments