Webdunia - Bharat's app for daily news and videos

Install App

ಶೀಘ್ರದಲ್ಲಿ 2, 3, 5 ಕೆ.ಜಿ. ತೂಕದ ಅಡುಗೆ ಅನಿಲ ಸಿಲಿಂಡರ್‌

Webdunia
ಭಾನುವಾರ, 19 ಮೇ 2013 (12:44 IST)
PTI
ಸಣ್ಣ ಗಾತ್ರದ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರುತ್ತಿರುವವರಿಗೆ ಕಡಿವಾಣ ಹಾಕಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 2, 3, 5 ಕೆ.ಜಿ. ತೂಕದ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಶೀಘ್ರದಲ್ಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಚಿಂತನೆ ನಡೆಸಿವೆ. ಈ ಪುಟಾಣಿ ಸಿಲಿಂಡರ್‌ಗಳು ಸಬ್ಸಿಡಿರಹಿತವಾಗಿ ಗ್ರಾಹಕರಿಗೆ ಸಿಗಲಿವೆ.

ಹಾಲಿ ಇರುವ ಅಡುಗೆ ಅನಿಲ ವಿತರಕ ಏಜೆನ್ಸಿಗಳ ಮೂಲಕ ಸಣ್ಣ ಸಿಲಿಂಡರ್‌ಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ. ಹೊಸ ಏಜೆನ್ಸಿಗಳನ್ನು ತೆರೆಯುವ ಚಿಂತನೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಪುಟಾಣಿ ಸಿಲಿಂಡರ್‌ಗಳ ಮಾರಾಟ ವ್ಯವಸ್ಥೆ ಹಾಲಿ ಇರುವ ಮಾರುಕಟ್ಟೆ ವ್ಯವಸ್ಥೆಗಿಂತ ವಿಭಿನ್ನವಾಗಿರುತ್ತದೆ ಎಂದು ಹೇಳಲಾಗಿದೆ.

2, 3, 5 ಕೆ.ಜಿ.ಯಷ್ಟೇ ಅಲ್ಲದೆ 7 ಹಾಗೂ 10 ಕೆ.ಜಿ. ತೂಕದ ಸಿಲಿಂಡರ್‌ಗಳನ್ನೂ ಮಾರುವ ಕುರಿತು ಚಿಂತನೆ ನಡೆದಿದೆ. ಇದರಿಂದಾಗಿ ವಲಸೆ ಕಾರ್ಮಿಕರು ಅಡುಗೆ ಅನಿಲಕ್ಕಾಗಿ ಪರದಾಡುವುದು ತಪ್ಪುತ್ತದೆ. ಪರ್ವತ ಪ್ರದೇಶಗಳು, ಜನಸಂಖ್ಯೆ ವಿರಳ ಇರುವ ಸ್ಥಳಗಳಿಗೆ ಸುಲಭವಾಗಿ ಸಾಗಿಸಬಹುದಾಗಿದೆ ಎಂದು ಮೂಲಗಳು ಹೇಳಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments