Webdunia - Bharat's app for daily news and videos

Install App

ಸಿಇಸಿ ನೇಮಕ ಸಮಿತಿಯಲ್ಲಿ ವಿಪಕ್ಷಗಳಿಗೆ ಸ್ಥಾನ: ಅಡ್ವಾಣಿ

Webdunia
ಭಾನುವಾರ, 6 ಮಾರ್ಚ್ 2011 (15:23 IST)
PTI
ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕನನ್ನು ಸೇರ್ಪಡೆಗೊಳಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಕೇಂದ್ರ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ಸಿವಿಸಿ ಮತ್ತು ಸಿಐಸಿ ಮುಖ್ಯಸ್ಥರ ನೇಮಕ ಮಾಡುವ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸ್ಥಾನ ನೀಡಲಾಗುತ್ತದೆ. ಅದರಂತೆ, ಚುನಾವಣಾ ಆಯುಕ್ತರ ನೇಮಕ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದ್ದಾರೆ.

1998 ರಲ್ಲಿ ಅಪೆಕ್ಸ್ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ವರ್ಮಾ, ನ್ಯಾಯಮೂರ್ತಿ ಎಸ್‌ಪಿ ಬರುಚಾ ಮತ್ತು ಎಸ್‌ಸಿ ಸೇನ್ ನೇತೃತ್ವದ ನ್ಯಾಯಪೀಠ ಸಿವಿಸಿ ಮುಖ್ಯಸ್ಥರ ಆಯ್ಕೆ ಸಮಿತಿಯಲ್ಲಿ ಪ್ರಧಾನ ಮಂತ್ರಿ,ಗೃಹ ಸಚಿವ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರಬೇಕು ಎಂದು ಮಹತ್ವದ ತೀರ್ಪು ನೀಡಿತ್ತು.

ನಂತರ, 2005ರ ಮಾಹಿತಿ ಹಕ್ಕು ಕಾಯ್ದೆ ಅನುಸಾರವಾಗಿ ಮುಖ್ಯ ವಾರ್ತಾ ಆಯುಕ್ತರನ್ನು ನೇಮಕ ಮಾಡುವಾಗ ಅಪೆಕ್ಸ್ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗಿತ್ತು. ಆದರೆ, ಗೃಹ ಸಚಿವರ ಬದಲಾಗಿ ಕಾನೂನು ಸಚಿವರನ್ನು ಸೇರ್ಪಡೆಗೊಳಿಸಲಾಗಿತ್ತು ಎಂದು ಬಿಜೆಪಿ ಪಕ್ಷದ ಹರಿಯ ನಾಯಕ ಎಲ್‌.ಕೆ.ಅಡ್ವಾಣಿ ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

Show comments