Webdunia - Bharat's app for daily news and videos

Install App

ಸಿಬಿಐಗೆ ಬಿಡಿಗಾಸು ಸಿಕ್ಕಿಲ್ಲ-ಮಾಧ್ಯಮದ ವಿಚಾರಣೆ ಬೇಡ: ಕಲ್ಮಾಡಿ

Webdunia
ಶನಿವಾರ, 5 ಮಾರ್ಚ್ 2011 (18:25 IST)
PTI
ನಾನು ಯಾವುದೇ ಅವ್ಯವಹಾರ ನಡೆಸಿಲ್ಲ, ಅಷ್ಟೇ ಅಲ್ಲ ನಾನು ತಪ್ಪು ಮಾಡಿದ್ದೇನೆ ಎಂಬುದಕ್ಕೆ ಯಾವ ಪುರಾವೆಯೂ ಸಿಕ್ಕಿಲ್ಲ. ಸಿಬಿಐ ದಾಳಿ ನಡೆಸಿದಾಗಲೂ ಒಂದೇ ಒಂದು ರೂಪಾಯಿಯನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ...ಇದು ಕಾಮನ್ವೆಲ್ತ್ ಗೇಮ್ಸ್ ಹಗರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸಿಡಬ್ಲ್ಯುಜಿ ಮಾಜಿ ಅಧ್ಯಕ್ಷ ಸುರೇಶ್ ಕಲ್ಮಾಡಿಯ ಮಾತುಗಳು.

ಕಾಮನ್ವೆಲ್ತ್ ಗೇಮ್ಸ್ ಆಯೋಜಕ ಸಮಿತಿಯ ಮಾಜಿ ಅಧ್ಯಕ್ಷರಾಗಿರುವ ಕಲ್ಮಾಡಿ ಹಗರಣಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಸರಕಾರ ಹಾಗೂ ತನಿಖಾ ಸಂಸ್ಥೆಗಳು ತಮ್ಮ ಕೆಲಸವನ್ನು ಮಾಡಿವೆ. ಅದಕ್ಕೆ ನಾನು ಸಂಪೂರ್ಣವಾಗಿ ಸಹಕರಿಸಿದ್ದೇನೆ. ಆದರೆ ನನಗೆ ಮಾಧ್ಯಮದ ವಿಚಾರಣೆಯ ಅಗತ್ಯವಿಲ್ಲ ಎಂದು ಪರೋಕ್ಷವಾಗಿ ಟಿವಿ ಚಾನೆಲ್‌ವೊಂದರ ವಿರುದ್ಧ ಟಾಂಗ್ ನೀಡಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತನಿಖಾ ಸಂಸ್ಥೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ನಾನು ಗೇಮ್ಸ್‌ ಮೂಲಕ ವೈಯಕ್ತಿಕವಾಗಿ ಲಾಭ ಮಾಡಿಕೊಂಡಿಲ್ಲ. ಈ ಮಾತನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ನಾನು ಯಾವುದೇ ತನಿಖೆಗೂ ಸಿದ್ದ ಎಂದು ಕಲ್ಮಾಡಿ ತಿಳಿಸಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ ಭಾರತಕ್ಕೊಂದು ಹೆಮ್ಮೆಯ ವಿಷಯ. ನಾವು ಉತ್ತಮವಾಗಿ ಗೇಮ್ಸ್ ಅನ್ನು ಸಂಘಟಿಸುವ ಮೂಲಕ ಜಾಗತಿಕ ಮಟ್ಟದಲ್ಲಿಯೇ ಶ್ಲಾಘನೆಗೊಳಗಾಗಿದೆ. ಏನೇ ಆರೋಪಗಳಿದ್ದರೂ ಅವೆಲ್ಲದರ ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ಹೇಳಿದರು.

ಕಾಮನ್ವೆಲ್ತ್ ಗೇಮ್ಸ್ ಸಂದರ್ಭದಲ್ಲಿ ಭಾರೀ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಮನ್ವೆಲ್ತ್ ಆಯೋಜಕ ಸಮಿತಿ ಅಧ್ಯಕ್ಷರಾಗಿದ್ದ ಸುರೇಶ್ ಕಲ್ಮಾಡಿ ಅವರನ್ನು ಕೇಂದ್ರ ಸರಕಾರ ಅಮಾನತುಗೊಳಿಸಿತ್ತು. ಅಲ್ಲದೇ ವಿಪಕ್ಷಗಳ ಒತ್ತಡದ ನಂತರ ಕಲ್ಮಾಡಿ ಮನೆಯ ಮೇಲೆ ಸಿಬಿಐ ದಾಳಿ ನಡೆಸಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

Show comments