Webdunia - Bharat's app for daily news and videos

Install App

ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕುಳಿತು ಊಟ ಮಾಡುವಂತಿಲ್ಲ : ತಾಲಿಬಾನ್

Webdunia
ಶನಿವಾರ, 14 ಮೇ 2022 (07:20 IST)
ಕಾಬೂಲ್‌ : ಪಶ್ಚಿಮ ಆಫ್ಘಾನಿಸ್ತಾನದ ಹೆರಾತ್‌ ನಗರದಲ್ಲಿ  ಪುರುಷರು  ಮತ್ತು  ಮಹಿಳೆಯರು  ಒಟ್ಟಿಗೆ ಕುಳಿತು  ಊಟ  ಮಾಡುವುದು ಹಾಗೂ ಉದ್ಯಾನಗಳಿಗೆ ಭೇಟಿ ನೀಡುವುದನ್ನು ತಾಲಿಬಾನ್‌ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಫ್ಘಾನಿಸ್ತಾನವು ಸಂಪ್ರದಾಯವಾದಿ ಮತ್ತು ಪಿತೃಪ್ರಭುತ್ವದ ರಾಷ್ಟ್ರವಾಗಿದೆ, ಆದರೆ  ರೆಸ್ಟೋರೆಂಟ್‌ಗಳಲ್ಲಿ  ಪುರುಷರು  ಮತ್ತು  ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದನ್ನು ಸಾಮಾನ್ಯ ಎನ್ನುವಂತಾಗಿದೆ. ಮುಖ್ಯವಾಗಿ ಆಫ್ಘಾನ್‌ ಮಾನದಂಡಗಳನ್ನು  ಮೀರಿ ಉದಾರವಾದಿ ನಗರ ಎನಿಸಿರುವ ಹೆರಾತ್‌ನಲ್ಲಿ ಇಂತಹ ದೃಶ್ಯಗಳು ಸಾಮಾನ್ಯವಾಗಿದೆ. ಇಲ್ಲೂ ಸಹ ತಾಲಿಬಾನ್‌ ಕಠಿಣ ನಿಯಮಗಳನ್ನು ವಿಧಿಸಿದೆ.

ಆಗಸ್ಟ್‌ನಲ್ಲಿ ಆಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಮರಳಿದ ನಂತರ ತಾಲಿಬಾನ್‌, ಪುರುಷರು  ಮತ್ತು  ಮಹಿಳೆಯರನ್ನು  ಪ್ರತ್ಯೇಕಿಸುವ  ನಿರ್ಬಂಧಗಳನ್ನು ವಿಧಿಸುತ್ತಿದೆ.

ಹೆರಾತ್‌ನಲ್ಲಿ ಸದ್ಗುಣ ಪ್ರಚಾರ ಮತ್ತು ದುರಾಚಾರ ತಡೆಗಟ್ಟುವಿಕೆ ಸಚಿವಾಲಯದ ತಾಲಿಬಾನ್ ಅಧಿಕಾರಿ ರಿಯಾಜುಲ್ಲಾ ಸೀರತ್, ರೆಸ್ಟೋರೆಂಟ್‌ಗಳಲ್ಲಿ ಪುರುಷರು ಮತ್ತು ಮಹಿಳೆಯರನ್ನು ಪ್ರತ್ಯೇಕಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ನಿಯಮ  ಕೇವಲ ಪುರುಷ ಮತ್ತು ಮಹಿಳೆಯರಿಗಷ್ಟೇ ಅಲ್ಲ, ಗಂಡ-ಹೆಂಡತಿಗೂ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಹೆರಾತ್ ರೆಸ್ಟೋರೆಂಟ್‌ನಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ನನಗೆ ಮತ್ತು ನನ್ನ ಪತಿಗೆ ಮ್ಯಾನೇಜರ್‌ ಹೇಳಿದ್ದರು  ಎಂದು  ಹೆಸರು ಹೇಳಲಿಚ್ಛಿಸದ ಮಹಿಳೆಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments