Daily Horoscope
✕

ಲೋಕಸಭಾ ಚುನಾವಣೆ: ವಡೋದರ ಕ್ಷೇತ್ರದಲ್ಲಿ ಮೋದಿಗೆ ಭರ್ಜರಿ ಗೆಲುವು.

Webdunia
ಶುಕ್ರವಾರ, 16 ಮೇ 2014 (10:19 IST)
ಇಂದು ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪಾಲಿಗೆ ಮೊದಲ ಸಿಹಿ ಸುದ್ದಿ ಹೊರಬಿದ್ದಿದೆ. ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿಯೆಂದೇ ಬಿಂಬಿಸಲಾಗಿದ್ದ ನರೇಂದ್ರ ಮೋದಿಯವರು, ತಮ್ಮ ತವರು ಗುಜರಾತ್ ರಾಜ್ಯದ ವಡೋದರ ಕ್ಷೇತ್ರದಲ್ಲಿ ಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್‌ನ ಪ್ರತಿಸ್ಪರ್ಧಿ ಮಧುಸೂದನ್ ಮಿಸ್ತ್ರಿಯವರನ್ನು ಸುಮಾರು 2 ಲಕ್ಷಕ್ಕಿಂತಲೂ ಅಧಿಕ ಮತಗಳಿಂದ ಪರಾಭವಗೊಳಿಸಿದ್ದಾರೆ. ಇದು ಸ್ವತಃ ಮೋದಿಯವರ ಮುಂದಿನ ರಾಜಕೀಯ ನಡೆಗೆ ಸುಗಮವಾಗಲಿದೆ. ನರೇಂದ್ರ ಮೋದಿಯವರು ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ವಡೋದರಾದಲ್ಲಿ ಜಯಶೀಲರಾಗಿದ್ದು, ಮತ್ತೊಂದು ಪ್ರಮುಖ ಲೋಕಸಭಾ ಕ್ಷೇತ್ರವಾಗಿರುವ ವಾರಣಾಸಿಯಲ್ಲಿ ಅರವಿಂದ ಕೇಜ್ರಿವಾಲ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
 
ಒಟ್ಟಾರೆ ದೇಶದಲ್ಲಿ ಬಿಜೆಪಿ ಪಕ್ಷವು ಇನ್ನಿಲ್ಲದಂತೆ ಮುನ್ನಡೆಯನ್ನು ಸಾಧಿಸಿದೆ. ಸತತ 10 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಪಕ್ಷವು ಭದ್ರಕೋಟೆಗಳಲ್ಲಿಯೇ ಮಣ್ಣು ಮುಕ್ಕುವ ಸಾಧ್ಯತೆಗಳು ಹೆಚ್ಚಾಗಿವೆ. ಲೋಕಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ನರೇಂದ್ರ ಮೋದಿಯವರನ್ನೇ ಗುರಿಯಾಗಿಸಿಕೊಂಡು ಭಾಷಣ ಮಾಡುತ್ತಿದ್ದ ಕಾಂಗ್ರೆಸ್‌ನ ಯುವರಾಜ ಹಾಗೂ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯಾಗಿದ್ದ ರಾಹುಲ್ ಗಾಂಧಿಯವರು ಸೋಲಿನ ದವಡೆಯಲ್ಲಿ ಸಿಲುಕಿದ್ದಾರೆ.
 
ಲೋಕಸಭಾ ಚುನಾವಣೆಯ ಕುರಿತ ಹೆಚ್ಚಿನ ಮಾಹಿತಿಗಾಗಿ, ಇಲ್ಲಿಗೆ ಭೇಟಿ ಕೊಡಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಸಂಪುಟ ಪುನಾರಚನೆ ಬಿಸಿ ನಡುವೆ ದೆಹಲಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡ ಸಿದ್ದರಾಮಯ್ಯ, ಜಮೀರ್

ಹಲೋ ವಿಜಯ್ ಸರ್ ನಿಮ್ಮ ಪಕ್ಕದಲ್ಲೇ ಇದ್ದ ಡಿಕೆ ಸಾಹೇಬ್ರಿಗೆ ಮೇಕೆದಾಟು ಯೋಜನೆ ಕೈ ಬಿಡಲು ಹೇಳಿದ್ರಾ: ಬಿಜೆಪಿ ನಾಯಕನ ವ್ಯಂಗ್ಯ Video

Show comments