ಭೋಪಾಲ್: ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ 10 ವರ್ಷದ ಬಾಲಕ ಸುಮಾರು 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಪಿಪಲಿಯಾ ಗ್ರಾಮದಲ್ಲಿ ಬಾಲಕ ಸುಮಿತ್ ಮೀನಾ ಎಂಬಾತ ಶನಿವಾರ ಸಂಜೆ ಆಕಸ್ಮತ್ ಆಗಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ.
ಬಾಲಕನ ರಕ್ಷಣೆಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೊಳವೆ ಬಾವಿಗೆ ಸಮಾನಂತರವಾಗಿ ಅಗೆಯಲಾಗುತ್ತಿದೆ, ಬಾಲಕನಿಗೆ ಆಮ್ಲಜನಕ ಪೂರೈಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸತೇಂದ್ರ ಸಿಂಗ್ ತಿಳಿಸಿದ್ದಾರೆ.
ಸುಮಾರು 39 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿರುವುದಾಗಿ ಅಂದಾಜಿಸಲಾಗಿದೆ ಎಂದು ರಾಧೋಗಢ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಯವರ್ಧನ್ ಸಿಂಗ್ ಮಾಹಿತಿ ನೀಡಿದ್ದಾರೆ.