ಮಂಗಳೂರು ಹಾಗೂ ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಕೇರಳದ ಕುರುಕುಟ್ಟಿ ರೈಲು ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ದಕ್ಷಿಣ ರೈಲ್ವೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಶನಿವಾರ ರಾತ್ರಿ 8.40ಕ್ಕೆ ತಿರುವನಂತಪುರಂ ರೈಲು ನಿಲ್ದಾಣದಿಂದ ಹೊರಟಿದ್ದ ಈ ರೈಲಿನ 12 ಬೋಗಿಗಳು ಹಳಿ ತಪ್ಪಿವೆ. ಎರ್ನಾಕುಲಂ ಜಿಲ್ಲೆಯ ಕುರಕಟ್ಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಘಟನೆಯ ನಂತರ ಪ್ರಯಾಣಿಕರಿಗೆ ತೊಂದರೆಯಾಗದಂತೆ ತ್ರಿಶೂರು ಹಾಗೂ ಕೊಚ್ಚಿಗೆ ಸ್ಥಳೀಯ ರೈಲು ಹಾಗೂ ಬಸ್‌ಗಳ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದು, ಕೇರಳದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ಮಂಜಾನೆ 6 ರಿಂದ 11 ಗಂಟೆಯವರೆಗೂ ಹಳಿ ದುರಸ್ಥಿ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ