Webdunia - Bharat's app for daily news and videos

Install App

ಹಳಿ ತಪ್ಪಿದ ಮಂಗಳೂರು-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲು!

Webdunia
ಭಾನುವಾರ, 28 ಆಗಸ್ಟ್ 2016 (10:45 IST)
ಮಂಗಳೂರು ಹಾಗೂ ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಘಟನೆ ಕೇರಳದ ಕುರುಕುಟ್ಟಿ ರೈಲು ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ದಕ್ಷಿಣ ರೈಲ್ವೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
 
ಶನಿವಾರ ರಾತ್ರಿ 8.40ಕ್ಕೆ ತಿರುವನಂತಪುರಂ ರೈಲು ನಿಲ್ದಾಣದಿಂದ ಹೊರಟಿದ್ದ ಈ ರೈಲಿನ 12 ಬೋಗಿಗಳು ಹಳಿ ತಪ್ಪಿವೆ. ಎರ್ನಾಕುಲಂ ಜಿಲ್ಲೆಯ ಕುರಕಟ್ಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಘಟನೆಯ ನಂತರ ಪ್ರಯಾಣಿಕರಿಗೆ ತೊಂದರೆಯಾಗದಂತೆ ತ್ರಿಶೂರು ಹಾಗೂ ಕೊಚ್ಚಿಗೆ ಸ್ಥಳೀಯ ರೈಲು ಹಾಗೂ ಬಸ್‌ಗಳ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 
 
ಘಟನೆಯಿಂದ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದು, ಕೇರಳದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ಮಂಜಾನೆ 6 ರಿಂದ 11 ಗಂಟೆಯವರೆಗೂ ಹಳಿ ದುರಸ್ಥಿ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments