ಇಬ್ಬರು ಕಾಮುಕರು ನನ್ನ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಕಾಲುಗಳನ್ನು ಸುಟ್ಟುಹಾಕಿದ್ದಾರೆ ಎಂದು 13 ವರ್ಷದ ಬಾಲಕಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಘಟನೆ ನಡೆದು ಆರು ತಿಂಗಳಾದರೂ ಪೊಲೀಸರು ಜೂನ್ 5 ರಂದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಕಳೆದ ವರ್ಷದ ಡಿಸೆಂಬರ್ 31 ರಂದು ಇಬ್ಬರು ವ್ಯಕ್ತಿಗಳು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಾರನೇ ದಿನ ಜನೆವರಿ 1 ರಂದು ಪೊಲೀಸ್ ಠಾಣೆಗೆ ದೂರು ನೀಡಲು ತೆರಳುತ್ತಿದ್ದಾಗ ಆರೋಪಿಗಳು ಮತ್ತು ಅವರ ಸಹೋದರಿಯರು ನಮ್ಮ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಡೀಸೆಲ್ ಸುರಿದು ಕಾಲುಗಳಿಗೆ ಬೆಂಕಿ ಹಚ್ಚಿದ್ದರು ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿಗಳು ಪದೇ ಪದೇ ಜೀವಬೆದರಿಕೆಯೊಡ್ಡುತ್ತಿದ್ದರಿಂದ ಬಾಲಕಿಗೆ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸಾಧ್ಯವಾಗಲಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
ನನ್ನ ಕಾಲುಗಳಿಗೆ ಬೆಂಕಿ ಹಚ್ಚಿದಂತೆ ಪೋಷಕರಿಗೆ ಅದೇ ಗತಿಯಾಗಲಿದೆ ಎಂದು ಆರೋಪಿಗಳು ಹೆದರಿಸಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಬಾಲಕಿ ತಿಳಿಸಿದ್ದಾಳೆ.
ಕೊನೆಗೂ ನೆರೆಮನೆಯ ವ್ಯಕ್ತಿಯೊಬ್ಬ ಪೋಷಕರಿಗೆ ಧೈರ್ಯ ತುಂಬಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಕರೆದುಕೊಂಡು ಹೋದಾಗ ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.